ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ : ವಿಭಾಗ ಮಟ್ಟಕ್ಕೆ ಆಯ್ಕೆ

pallavi_koppal
ಕೊಪ್ಪಳ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಪ್ಪಳದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಚಿತ್ರಕಲಾ ವಿಭಾಗದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಪಲ್ಲವಿ ಘೋರ್ಪಡೆ ಪ್ರಥಮ ಬಹುಮಾನ ಪಡೆದು, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಹಳ್ಳಿಯ ಸೊಗಡು ಚಿತ್ರಕಲಾ ಸ್ಪರ್ಧೆಯ ವಿಷಯವಾಗಿತ್ತು. ವಿಭಾಗಮಟ್ಟದ ಸ್ಪರ್ಧೆಯು ಡಿ.೦೯ ರಂದು ಗುಲ್ಬರ್ಗಾದಲ್ಲಿ ನಡೆಯಲಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.

Related posts

Leave a Comment