Breaking News
Home / Koppal News-1 / ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವರು ಸೆ. ೦೮ ರಿಂದ ೧೦ ರವರೆಗೆ ಮೂರು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಸೆ. ೦೮ ರಂದು ಬೆಳಿಗ್ಗೆ ೧೧ ಗಂಟೆಗೆ ಯಲಬುರ್ಗಾದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ೦೩ ಗಂಟೆಗೆ ಯಲಬುರ್ಗಾದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು. ಸೆ. ೦೯ ರಂದು ೧೦ ಗಂಟೆಗೆ ನರೇಗಲ್ ನ ಶ್ರೀ ಅನ್ನದಾನೇಶ್ವರ ಕಾಲೇಜು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ೦೧ ಗಂಟೆಗೆ ಯಲಬುರ್ಗಾಕ್ಕೆ ಆಗಮಿಸಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಕೈಗೊಳ್ಳುವರು. ನಂತರ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಸೆ. ೧೦ ರಂದು ಬೆಳಿಗ್ಗೆ ೮-೩೦ ಗಂಟೆಗೆ ರಾಯಚೂರು ಜಿಲ್ಲೆ ಸಿಂಧನೂರಿಗೆ ತೆರಳಿ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ೦೨ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

About admin

Leave a Reply

Scroll To Top