ಜಿ.ಪಂ. ಅಧ್ಯಕ್ಷರಾಗಿ ಶೇಖರಪ್ಪ ನಾಗರಳ್ಳಿ, ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ನೀರಲೂಟಿ ಆಯ್ಕೆ

ಕೊಪ್ಪಳ ಜಿಲ್ಲಾ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಹಿರೇಸಿಂದೋಗಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯ ಶೇಖರಪ್ಪ ನಾzp-president-sb-nagaralliಗರಳ್ಳಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮಾದಿನಾಳ-ವೆಂಕಟಗಿರಿ ಕ್ಷೇತ್ರದ ಜಿ.ಪಂ. ಸದಸ್ಯೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ ಅವರು ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಶನಿವಾರದಂದು ನಡೆದ ಚುನಾವಣೆಯಲ್ಲಿ, ನೂತನ ಅಧ್ಯಕ್ಷರಾಗಿ ಶೇಖರಪ್ಪ ನಾಗರಳ್ಳಿ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ನೀರಲೂಟಿ ಅವರು ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿ ಆಗಮಿಸಿದ್ದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ಘೋಷಿಸಿದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ಶನಿವಾರದಂದು ಜಿ.ಪಂ. ಸಭಾಂಗಣದಲ್ಲಿ ಜರುಗಿತು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ಅಧ್ಯಕ್ಷ zp-president-sb-nagaralli-koppal zp-president-sb-nagaralli-koppal-election zp-vice-president-laxmamma-neeralooti-koppalಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಶೇಖರಪ್ಪ ನಾಗರಳ್ಳಿ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಿರೇಮನ್ನಾಪುರ ಕ್ಷೇತ್ರದ ಜಿ.ಪಂ. ಸದಸ್ಯ ಕೆ. ಮಹೇಶ್ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೊರಡಕೇರಾ ಕ್ಷೇತ್ರದ ಜಿ.ಪಂ. ಸದಸ್ಯೆ ಜೈನರ್ ಶರಣಮ್ಮ ಸಂಗನಗೌಡ ಅವರು ನಾಮಪತ್ರ ಸಲ್ಲಿಸಿದರು.
ಮಧ್ಯಾಹ್ನ 3 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡು, ನಾಮಪತ್ರ ಪರಿಶೀಲನೆ ನಡೆಸಿದ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಘೋಷಿಸಿದರು. ನಾಮಪತ್ರ ಹಿಂಪಡೆಯಲು 5 ನಿಮಿಷ ಕಾಲಾವಕಾಶ ಒದಗಿಸಲಾಯಿತು. ಯಾರೂ ನಾಮಪತ್ರ ಹಿಂಪಡೆಯದಿದ್ದರಿಂದ, ಚುನಾವಣೆ ನಡೆಸಲಾಯಿತು. ಒಟ್ಟು 29 ಸದಸ್ಯ ಬಲ ಹೊಂದಿರುವ ಕೊಪ್ಪಳ ಜಿಲ್ಲಾ ಪಂಚಾಯತಿಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಜಿಲ್ಲಾ ಪಂಚಾಯತಿಯ ಎಲ್ಲ 29 ಸದಸ್ಯರು.
ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಶೇಖರಪ್ಪ ನಾಗರಳ್ಳಿ ಅವರ ಪರವಾಗಿ ಒಟ್ಟು 17 ಜನ ಸದಸ್ಯರು ತಮ್ಮ ಬೆಂಬಲ ವ್ಯಕ್ತಪಡಿಸಿದರು. ಕೆ. ಮಹೇಶ್ ಅವರ ಪರವಾಗಿ 12 ಜನ ಸದಸ್ಯರು ಬೆಂಬಲಿಸಿದರು. ಒಟ್ಟು 29 ಸದಸ್ಯ ಬಲ ಹೊಂದಿರುವ ಜಿಲ್ಲಾ ಪಂಚಾಯತಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೇಖರಪ್ಪ ನಾಗರಳ್ಳಿ ಅವರು 17-12 ಅಂತರದಲ್ಲಿ ಬಹುಮತ ಪಡೆದು, ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡರು.
ಉಪಾಧ್ಯಕ್ಷ ಸ್ಥಾನದ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಲಕ್ಷ್ಮಮ್ಮ ನೀರಲೂಟಿ ಅವರ ಪರವಾಗಿ ಒಟ್ಟು 17 ಜನ ಸದಸ್ಯರು ತಮ್ಮ ಬೆಂಬಲ ವ್ಯಕ್ತಪಡಿಸಿದರು. ಜೈನರ್ ಶರಣಮ್ಮ ಸಂಗನಗೌಡರ ಅವರ ಪರವಾಗಿ 12 ಜನ ಸದಸ್ಯರು ಬೆಂಬಲಿಸಿದರು. ಒಟ್ಟು 29 ಸದಸ್ಯ ಬಲ ಹೊಂದಿರುವ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲಕ್ಷ್ಮಮ್ಮ ನೀರಲೂಟಿ ಅವರು 17-12 ಅಂತರದಲ್ಲಿ ಬಹುಮತ ಪಡೆದು, ನೂತನ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.
ಚುನಾವಣೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಎಲ್ಲ ಸದಸ್ಯರುಗಳು, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೇಖರಪ್ಪ ನಾಗರಳ್ಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು, ಹಾಗೂ ಜಾನುವಾರುಗಳಿಗೆ ಮೇವಿನ ತೊಂದರೆ ಆಗದಂತೆ ಮೊದಲ ಆದ್ಯತೆ ನೀಡಿ, ಬರ ಪರಿಸ್ಥಿತಿ ನಿರ್ವಹಣೆಗೆ ಮುಂದಾಗುವುದಾಗಿ ಭರವಸೆ ನೀಡಿದರು. ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಗಣ್ಯರಾದ ಬಸವರಾಜ ಹಿಟ್ನಾಳ್, ಅಮರೇಗೌಡ ಬಯ್ಯಾಪುರ ಮುಂತಾದವರು ಜಿಲ್ಲಾ ಪಂಚಾಯತಿಯ ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಈ ಸಂದರ್ಭದಲ್ಲಿ ಶುಭ ಹಾರೈಸಿದರು.

Please follow and like us:
error