ಜೂ. ೦೫ ರಂದು ಕೊಪ್ಪಳದಲ್ಲಿ ಹಸಿರೀಕರಣ ಅಭಿಯಾನ ಆರಂಭ : ಸಹಕಾರಕ್ಕೆ ಮನವಿ

ವಿಶ್ವ ಪರಿಸರ ದಿನಾಚರಣೆ ಅಂಗವಾgreenery-koppalಗಿ ಜಿಲ್ಲಾಡಳಿತ, ಅರಣ್ಯ ಇಲಾಖೆಯ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಹಸಿರೀಕರಣ ಅಭಿಯಾನಕ್ಕೆ ಜೂ. ೦೫ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ತಿಳಿಸಿದ್ದಾರೆ.
ಹಸಿರೀಕರಣ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಮೂರು ತಿಂಗಳ ಅವಧಿಯಲ್ಲಿ ಸುಮಾರು ೦೪ ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ. ಈ ಪೈಕಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದಲೇ ೦೨ ಲಕ್ಷ ಗಿಡಗಳನ್ನು ನೆಡುವ ಉದ್ದೇಶವಿದೆ. ಉಳಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳು, ಶಾಲೆ, ಆಸ್ಪತ್ರೆ, ಉದ್ಯಾನವನ ಹಾಗೂ ಇತರೆ ಸರ್ಕಾರಿ ಕಟ್ಟಡ ಪ್ರದೇಶದ ಆವರಣದಲ್ಲಿ ೦೨ ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ನಗರ ಒಂದರಲ್ಲೇ ಸುಮಾರು ೨೫ ಸಾವಿರ ಗಿಡಗಳನ್ನು ನೆಡುವ ಉದ್ದೇಶವಿದ್ದು, ಈ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಿ.ಎಸ್. ವಸ್ತ್ರದ ಅವರು ಜೂ. ೦೫ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಕೊಪ್ಪಳ ನಗರ ಹಾಗೂ ಜಿಲ್ಲೆಯ ಎಲ್ಲ ಸಾರ್ವಜನಿಕರು, ಸಂಘ ಸಂಸ್ಥೆಗಳು ಹಸಿರೀಕಣ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್.  ಮನವಿ ಮಾಡಿಕೊಂಡಿದ್ದಾರೆ.

Please follow and like us:
error