ಜೂ.೨೦ ರಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಜಿಲ್ಲೆಯಲ್ಲಿ ಜೂ.೨೦ ರಿಂದ ಜೂ.೨೭ ರ ವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು ಒಟ್ಟು ೪೭೦೬ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ದಿನಗಳಂದು ಬೆಳಿಗ್ಗೆ ೯ ರಿಂದ ಮ.೨ ರ ವರೆಗೆ ಪರೀಕ್ಷಾ ಕೇಂದ್ರದ ಸುತ್ತ-ಮುತ್ತಲಿನ ೨೦೦ ಮೀ ಅಂತರದ ಪ್ರದೇಶದಲ್ಲಿ ನಿಷೇದಾಜ್ಷೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳು : ಕೊಪ್ಪಳ : ಸರ್ಕಾರಿ ಬಾಲಕರ ಪ.ಪೂ ಕಾಲೇಜು, ಗವಿಸಿದ್ದೇಶ್ವರ ಪ್ರೌಢ ಶಾಲೆ, ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು, ಎಸ್‌ಎಫ್‌ಎಸ್ ಪ್ರೌಢ ಶಾಲೆ, ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ. ಗಂಗಾವತಿ : ಸರ್ಕಾರಿ ಬಾಲಕರ ಪ.ಪೂ ಕಾಲೇಜು, ಕೊಟ್ಟೂರೇಶ್ವರ ಪ.ಪೂ ಕಾಲೇಜು, ಎಂಎನ್‌ಎಂ ಸರ್ಕಾರಿ ಬಾ ಪ.ಪೂ ಕಾಲೇಜು, ಬೆಥೆಲ್ ಆಂಗ್ಲ ಪ್ರೌಢಶಾಲೆ. ಯಲಬುರ್ಗಾ : ಸರ್ಕಾರಿ ಪ.ಪೂ ಕಾಲೇಜು, ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು. ಕುಷ್ಟಗಿ : ಸರ್ಕಾರಿ ಪ.ಪೂ ಕಾಲೇಜು (ಪ್ರೌಢಶಾಲಾ ವಿಭಾಗ). ಈ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಗಂಗಾವತಿ ತಾಲೂಕಿನಲ್ಲಿ ೧೫೫೩ ವಿದ್ಯಾರ್ಥಿಗಳು, ಕೊಪ್ಪಳ-೧೯೯೬, ಕುಷ್ಟಗಿ-೪೫೨ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ೭೦೫ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೪೭೦೬ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್, ಪೇಜರ್,ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿಷೇಧಿಸಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ನಕಲು ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀ ಅಂತರದ ಒಳಗೆ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
error