ಜೂ.೨೧ ರಂದು ಕೊಪ್ಪಳದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

yoga ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ೨ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಜೂ.೨೧ ರಂದು ಬೆಳಿಗ್ಗೆ ೦೭ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಗವಿಮಠದ ಗವಿಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್.ತಂಗಡಗಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು. ಜಿ.ಪಂ ಅಧ್ಯಕ್ಷ ಶೇಖರಪ್ಪ ಬಿ ನಾಗರಳ್ಳಿ, ಲೋಕಸಭಾ ಸದಸ್ಯ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರು, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿ.ಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ತಾಲೂಕಾ ಪಂಚಾಯತ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಎಸ್. ವಸ್ತ್ರದ ಮುಖ್ಯ ಅಥಿತಿಗಳಾಗಿ ಪಾಲ್ಗೊಳ್ಳುವರು. ಆಯುಷ್ ನಿರ್ದೇಶನಾಲಯದ ನಿರ್ದೇಶಕ ಸುಭಾಷ್ ಕೆ. ಮಾಳ್ಖೇಡೆ, ಆಯುಷ್ ಇಲಾಖೆಯ ಉಪನಿರ್ದೇಶಕ ಡಾ.ಸತೀಶ್ ವಿಷೇಶ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

Leave a Reply