ಟಿಪ್ಪು ಜಯಂತಿ: ಸರಕಾರದ ತೀರ್ಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

tippu_jayanti_koppal_bjp_protest (3) tippu_jayanti_koppal_bjp_protest (2) tippu_jayanti_koppal_bjp_protest (1) tippu_jayanti_koppal_bjp_protest (4)

ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವ ಸರಕಾರದ ತೀರ್ಮಾನವನ್ನು ಖಂಡಿಸಿ ಕೊಪ್ಪಳದಲ್ಲಿಂದು ಬಿಜೆಪಿ ಪ್ರತಿಭಟನೆ ಮಾಡಿತು. ಕೊಪ್ಪಳ ಜಿಲ್ಲಾ ಬಿಜೆಪಿಯ ನಾಯಕರು ಮತ್ತು ಕಾರ್ಯಕರ್ತರು ಮೆರವವಣಿಗೆಯ ಮೂಲಕ ಅಶೋಕ್ ಸರ್ಕಲ್ ಗೆ ಆಗಮಿಸಿ ಅಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರಕಾರದ ದೋರಣೆಯನನ್ನು ಖಂಡಿಸಿದರು.

 

ಮತಬ್ಯಾಂಕಿಗಾಗಿ ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ, ಸರಕಾರ ಕೊಲೆಗಡುಕರ ರಕ್ಷಣೆ ಮಾಡುತ್ತಿದೆ. ಈ ಕೂಡಲೇ ಟಿಪ್ಪು ಜಯಂತಿಯನ್ನು ಆಚರಿಸುವುದನ್ನು ಕೈಬಿಡಬೇಕು ಮತ್ತು ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಪರಮೇಶ್ವರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಸುಮಾರು ಅರ್ಧಗಂಟೆಯವರೆಗೆ ರಸ್ತೆ ತಡೆ ಮಾಡಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕಾಗಮಿಸಿದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು ಮತ್ತೆ ಪ್ರತಿಭಟನೆ ಮುಂದುವರೆಸಿದಾಗ ಪೊಲೀಸರು ಅವರನ್ನು ಬಲವಂತವಾಗಿ ಅಲ್ಲಿಂದ ಎಬ್ಬಿಸಿ ತಮ್ಮ ವಶಕ್ಕೆ ಪಡೆದುಕೊಂಡರು. ಮಹಿಳಾ ಕಾರ್ಯಕರ್ತೆಯರನ್ನೂ ಸಹ ಬಂಧಿಸಲಾಯಿತು. ಸಂಸದ ಕರಡಿ ಸಂಗಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ಸಿ.ವಿ.ಚಂದ್ರಶೇಖರ , ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು

Please follow and like us:
error