: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೦ ನೇ ಪುಣ್ಯತಿಥಿ ಅಂಗವಾಗಿ ಕೊಪ್ಪಳದಲ್ಲಿ ವಿವಿಧ ಗಣ್ಯರಿಂದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಜಿಲ್ಲಾ ಪಂಚಾಯತಿ ಸದಸ್ಯರುಗಳು, ವಿವಿಧ ಅಧಿಕಾರಿಗಳು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಭಕ್ತಿ ಪೂರ್ವಕ ಪುಷ್ಪ ನಮನ ಸಲ್ಲಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಉಪಕಾರ್ಯದರ್ಶಿ ಎನ್.ಕೆ. ತೊರವಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದು, ಅಂಬೇಡ್ಕರ್ ಭಾವಚಿತ್ರಕ್ಕೆ ಭಕ್ತಿ ನಮನ ಸಲ್ಲಿಸಿದರು.
ಡಾ. ಅಂಬೇಡ್ಕರ್ ಅವರ ಪುಣ್ಯತಿಥಿ ಅಂಗವಾಗಿ ಭಕ್ತಿ ನಮನ
Please follow and like us: