ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್‌ರವರ ಋಣ ಕಥೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಬೆಳ್ಳಿ ಪದಕ

kotnekal
ಕೊಪ್ಪಳ ೧೬ ನ : ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್‌ರವರ ಋಣ ಕಥೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯವು ಏರ್ಪಡಿಸಿದ್ದ ದಿ.ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಎರಡನೇ ಬಹುಮಾನದ ಬೆಳ್ಳಿ ಪದಕ ಲಭಿಸಿದೆ. ಈ ಪ್ರಶಸ್ತಿಯು ಸ್ಮರಣಿಕೆ, ಪ್ರಶಸ್ತಿಪತ್ರ ಮತ್ತು ೩೦೦೦ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಡಿಸೆಂಬರ ೧ರಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ನೀಡಲಾಗುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಸಾರಾಂಗ ನಿರ್ದೇಶಕರಾದ ಪ್ರೊ.ಎಚ್.ಟಿ ಪೋತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪಡೆದ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಇವರನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಸಕಲ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Please follow and like us:
error