You are here
Home > Koppal News-1 > ಡಿ.೨೯ ವಿಶ್ವ ಮಾನವ ದಿನಾಚರಣೆ : ಡಾ. ರಹಮತ್ ತರೀಕೆರೆ ವಿಶೇಷ ಉಪನ್ಯಾಸ

ಡಿ.೨೯ ವಿಶ್ವ ಮಾನವ ದಿನಾಚರಣೆ : ಡಾ. ರಹಮತ್ ತರೀಕೆರೆ ವಿಶೇಷ ಉಪನ್ಯಾಸ

vishwa-manava-dinacharane: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಡಿ.೨೯ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ನಾಗರಳ್ಳಿ ಶೇಖರಪ್ಪ ಬಸವರಡ್ಡೆಪ್ಪ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದ್ರಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾದ್ಯಾಪಕ ಡಾ. ರಹಮತ್ ತರೀಕೆರೆ ಅವರು ಕಾರ್ಯಕ್ರಮ ಅಂಗವಾಗಿ ವಿಶೇಷ ಉಪನ್ಯಾಸ ನೀಡುವರು .

Leave a Reply

Top