ತಮಿಳುನಾಡಿಗೆ ನೀರು ಬಿಡಲ್ಲ :ಸಚಿವ ಸಂಪುಟ ಸಭೆ

cm_siddaramayyaಬೆಂಗಳೂರು, ಸೆ.21: ತಮಿಳುನಾಡಿಗೆ ಮತ್ತೆ ನೀರು ಬಿಡದಿರಲು ಸಿಎಂ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆ ಕಠಿಣ ನಿರ್ಧಾರ ಕೈಗೊಂಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಸರ್ವಪಕ್ಷ ಸಭೆಯ ಚರ್ಚೆಯ ಬಳಿಕ ತುರ್ತು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಬಿಡದಿರಲು ತೀರ್ಮಾನಿಸಲಾಗಿದೆ.

ಸಿಎಂ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಬಿಡುವುದು ಸೂಕ್ತವಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಹೆಚ್ಚು ಸಂಸದರನ್ನು ಹೊಂದಿರುವ ಬಿಜೆಪಿ ಗೈರು ಹಾಜರಾಗಿತ್ತು. ಬಿಜೆಪಿ ಸರ್ವಪಕ್ಷಗಳ ಸಭೆಗೆ ಗೈರು ಹಾಜರಾಗಿರುವುದಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಅವರು ಸಲಹೆ ನೀಡಿದ್ದರು.

‘‘ಸರ್ವ ಪಕ್ಷ ಸಭೆಯಲ್ಲಿ ಎಲ್ಲ ವಿಷಯ ಚರ್ಚಿಸಿದ್ದೇವೆ. ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿದ್ದೇವೆ’’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದರು. ಬಳಿಕ ತುರ್ತು ಸಚಿವ ಸಂಪುಟ ಸಭೆ ನಡೆದಿತ್ತು.

ಸರ್ವಪಕ್ಷಗಳ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾಂಡಿಸ್, ಎಂ. ವೀರಪ್ಪ ಮೊಲಿ, ಸಿಎಸ್ ಪುಟ್ಟರಾಜು ಸಹಿತ ಸಂಸದರು, ಸಚಿವರು, ಶಾಸಕರು ಹಾಜರಿದ್ದರು.

Please follow and like us:
error