ಧನಸಹಾಯ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ತಾಂತ್ರಿಕ ಮಾರ್ಗದರ್ಶನ ಕಾರ್ಯಗಾರ

:koppal-kanndanet-logo-news ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ಯೋಜನೆಗಳಡಿ ಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಮತ್ತು ಕಲಾವಿದರಿಗೆ ನೀಡಲಾಗುವ ಧನಸಹಾಯಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಯಸುವವರಿಗೆ ಜು. ೦೪ ರಂದು ಬೆಂಗಳೂರಿನಲ್ಲಿ ತಾಂತ್ರಿಕ ಮಾರ್ಗದರ್ಶನ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆ.
ಕಳೆದ ಸಾಲಿನಲ್ಲಿ ಸುಮಾರು ೪೦೦೦ ಕ್ಕೂ ಹೆಚ್ಚು ಕಲಾವಿದರು ಹಾಗೂ ಸಂಘ ಸಂಸ್ಥೆಗಳು ಧನ ಸಹಾಯ ಯೋಜನೆಗಾಗಿ ಅರ್ಜಿ ಸಲ್ಲಿಸಿದ್ದು, ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸ ಬಯಸುವವರಿಗೆ ತಾಂತ್ರಿಕ ಮಾರ್ಗದರ್ಶನ ನೀಡುವುದಕ್ಕಾಗಿ ಜು.೪ ರಂದು ಬೆಳಗ್ಗೆ ೧೧ ರಿಂದ ೧೨ ಗಂಟೆ ವರೆಗೆ ಬೆಂಗಳೂರಿನ ಜೆ ಸಿ ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.
ಆಸಕ್ತರು ತರಬೇತಿ ಕಾರ್ಯಾಗಾರದಲ್ಲಿ ಖುದ್ದಾಗಿ ಅಥವಾ ತಮ್ಮ ಸಂಸ್ಥೆಯ ಪ್ರತಿನಿಧಿಗಳ ಮೂಲಕ ಭಾಗವಹಿಸಿ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕೊಪ್ಪಳ ಜಿಲ್ಲಾ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದೂ. ಸಂ: ೦೮೫೩೯-೨೨೧೪೧೭ ಗೆ ಸಂಪರ್ಕಿಸಬಹುದು.

Please follow and like us:
error