ನ. ೦೬ ರಂದು ಬೆಂಗಳೂರಿನಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಮುಂಗಾರು ಹಂಗಾಮಿನ ತುರ್ತು ಸಭೆ ನ. ೦೬ ರಂದು ಮಧ್ಯಾಹ್ನ ೦೩ ಗಂಟೆಗೆ ಬೆಂಗಳೂರಿನ ವಿಕಾಸಸೌಧ ಕೊಠಡಿ ಸಂಖ್ಯೆ ೪೧೯ ರಲ್ಲಿನ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ವಹಿಸುವರು. ಸಭೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಒದಗಿಸುವ ಕುರಿತು ಪರಾಮರ್ಶೆ ನಡೆಯಲಿದೆ ಎಂದು ತುಂಗಭದ್ರಾ ಯೋಜನಾ ವೃತ್ತದ ಅಧಿಕ್ಷಕ ಅಭಿಯಂತರ ಭೋಜಾನಾಯ್ಕ ಕಟ್ಟಿಮನಿ  ತಿಳಿಸಿದ್ದಾರೆ

Please follow and like us:
error