You are here
Home > Koppal News-1 > ನ. ೧೦ ರಂದು ಕೊಪ್ಪಳದಲ್ಲಿ ಟಿಪ್ಪು ಜಯಂತಿ ಸಮಾರಂಭ

ನ. ೧೦ ರಂದು ಕೊಪ್ಪಳದಲ್ಲಿ ಟಿಪ್ಪು ಜಯಂತಿ ಸಮಾರಂಭ

tippu-jayanti-koppal tippu-jayanti-koppal-celeberation: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಸಮಾರಂಭ ನ. ೧೦ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ನಾಗರಳ್ಳಿ ಶೇಖರಪ್ಪ ಬಸವರಡ್ಡೆಪ್ಪ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಪಾಲ್ಗೊಳ್ಳುವರು. ಮೌಲಾನಾ ಮುಫ್ತಿ ಮಹಮ್ಮದ್ ನಜೀರ್ ಅಹ್ಮದ್ ಅವರು ಸಮಾರಂಭದಲ್ಲಿ ಭಾಗವಹಿಸುವರು. ಹಗರಿಬೊಮ್ಮನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಅಕ್ಕಿ ಬಸವೇಶ ಹಜರತ್ ಟಿಪ್ಪು ಸುಲ್ತಾನ್ ಕುರಿತು ವಿಶೇಷ ಉಪನ್ಯಾಸ ನೀಡುವರು.

Leave a Reply

Top