You are here
Home > Koppal News-1 > ನ.೧೭ ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ

ನ.೧೭ ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ

: ಕೊಪ್ಪಳ ಜಿಲ್ಲಾಡಳಿತ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಹಿಮ್ಮತ್‌ಸಿಂಗ್‌ಕಾ ಲೈನೆನ್ಸ್ ಹಾಸನ ಇವರುಗಳ ಸಂಯುಕ್ತಾಶ್ರಯದಲ್ಲಿ ನ.೧೭ ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಬೆಳಿಗ್ಗೆ ೧೦ ಗಂಟೆಗೆ ಸಿದ್ದ ಉಡುಪು ತಯಾರಿಕೆ ಕೊಪ್ಪಳ ಜಿಲ್ಲಾ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು. ಜಿ.ಪಂ ಅಧ್ಯಕ್ಷ ನಾಗರಳ್ಳಿ ಶೇಖರಪ್ಪ ಬಸವರಡ್ಡೆಪ್ಪ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್.ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣ ಶರಣಪ್ಪ ಅಗಸಿಮುಂದಿನ, ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್, ಕೈಗಾರಿಕಾ ಮತ್ತು ವಾಣಿಜ್ಯ ನಿರ್ದೇಶನಾಲಯ(ಯೋಜನೆ) ಜಂಟಿ ನಿರ್ದೇಶಕಿ ಯಮುನಾ, ಹಿಮ್ಮತ್‌ಸಿಂಗ್‌ಕಾ ಲೈನೆನ್ಸ್ ಪ್ರಧಾನ ವ್ಯವಸ್ಥಾಪಕ ವಿನೋದ ಕೆ.ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ.ನಾಗೇಶ್  ತಿಳಿಸಿದ್ದಾರೆ.

Leave a Reply

Top