You are here
Home > Koppal News-1 > ನ.೧೭ ರಂದು ಕೊಪ್ಪಳದಲ್ಲಿ ಭಕ್ತ ಕನಕದಾಸರ ಜಯಂತಿ

ನ.೧೭ ರಂದು ಕೊಪ್ಪಳದಲ್ಲಿ ಭಕ್ತ ಕನಕದಾಸರ ಜಯಂತಿ

kanak-jayanati: ಜಿಲ್ಲಾಡಳಿತದ ವತಿಯಿಂದ ಭಕ್ತ ಕನಕದಾಸರ ಜಯಂತಿ ನ.೧೭ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ.
ಭಕ್ತ ಕನಕದಾಸ ಜಯಂತಿ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳದ ಸಿರಸಪ್ಪಯ್ಯಮಠದ ಆವರಣದಲ್ಲಿ ಭಕ್ತ ಕನಕದಾಸರ ಭಾವಚಿತ್ರದ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು ಗಡಿಯಾರ ಕಂಬ, ಜವಾಹರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಸಾಗಿ ಬರಲಿದೆ. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭ ಅಧ್ಯಕ್ಷತೆ ವಹಿಸುವರು. ಜಿ.ಪಂ ಅಧ್ಯಕ್ಷ ನಾಗರಳ್ಳಿ ಶೇಖರಪ್ಪ ಬಸವರಡ್ಡೆಪ್ಪ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹಿರೇಸಿಂದೋಗಿ ಸರಕಾರಿ ಪ.ಪೂ ಕಾಲೇಜು ಕನ್ನಡ ಉಪನ್ಯಾಸಕ ಶಂಕ್ರಯ್ಯ ಅಬ್ಬಿಗೇರಿಮಠ ಅವರು ಭಕ್ತ ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡುವರು.

Leave a Reply

Top