ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ

ರಾಜ್ಯ ಸರ್ಕಾರವು ಕರ್ನಾಟಕ ಪೊಲೀಸ್ ಕಾಯ್ದೆ ೨೦೧೨ ರ ತಿದುಪಡಿ ಪ್ರಕಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ದೂರುಗಳ ವಿಚಾರಣೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ದೂರು ಪ್ರಾಧಿಕಾರಗಳನ್ನು ರಚಿಸಿದ್ದು, ಜಿಲ್ಲೆಯ ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿಗಳ ವಿರುದ್ಧ ದೂರುಗಳಿದ್ದಲ್ಲಿ, ಸಾರ್ವಜನಿಕರು ಪ್ರಾಧಿಕಾರಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ತ್ಯಾಗರಾಜ್ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರವು ಡಿಎಸ್‌ಪಿ koppal-spಮತ್ತು ಅದಕ್ಕಿಂತ ಕೆಳದರ್ಜೆ ಅಧಿಕಾರಿ/ಸಿಬ್ಬಂದಿಗಳ ವಿರುದ್ಧದ ಆರೋಪ ಅಂದರೆ ಯಾವುದೇ ಸಾರ್ವಜನಿಕ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತಹ, ಪೊಲೀಸ್ ವಶದಲ್ಲಿದ್ದಾಗ ಮರಣ, ಐಪಿಸಿ ಸೆಕ್ಷನ್-೩೨೦ ರಲ್ಲಿ ತಿಳಿಸಲಾದಂತಹ ಗಂಭೀರ ಗಾಯ, ಮಾನಭಂಗ, ಅಥವಾ ಮಾನಭಂಗಕ್ಕೆ ಯತ್ನ ಅಥವಾ ಕಾನೂನು ಪ್ರಕಾರವಲ್ಲದ ಬಂಧನ ಇಲ್ಲವೇ ವಶದಲ್ಲಿರಿಸಿಕೊಳ್ಳುವುದು, ಇತರ ಗಂಭೀರ ದುರ್ನಡತೆ ದೂರುಗಳ ವಿಚಾರಣೆ ಮಾಡಲಿದೆ.
ಪೊಲೀಸ್ ಉಪಾಧೀಕ್ಷರು ಮತ್ತು ಅದಕ್ಕಿಂತ ಕೆಳ ಹಂತದ ಅಧಿಕಾರಿ/ಸಿಬ್ಬಂಧಿಗಳ ವಿರುದ್ದದ ದೂರುಗಳನ್ನು, ಸಾರ್ವಜನಿಕರು ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ, ಜಿಲ್ಲಾ ಪೊಲೀಸ್ ಅಧೀಕ್ಷಕರವರ ಕಛೇರಿ, ಅಶೋಕ ಸರ್ಕಲ್, ಕೊಪ್ಪಳ, ದೂರವಾಣಿ-೦೮೫೩೯-೨೩೦೧೧೧ ಇಲ್ಲಿಗೆ ಸಲ್ಲಿಸಬಹುದು.
ಡಿಎಸ್‌ಪಿ ಹುದ್ದೆಯ ಅಧಿಕಾರಿಗಿಂತ ಮೇಲಿನ ದರ್ಜೆಯ ಅಧಿಕಾರಿಗಳ ವಿರುದ್ದದ ದೂರುಗಳನ್ನು ಅಧ್ಯಕ್ಷರು, ರಾಜ್ಯ ಪೊಲೀಸ್ ದೂರು ಪ್ರಾಧಿಕಾರ, ಕೊಠಡಿ ಸಂ.೩೬, ನೆಲಮಹಡಿ, ವಿಕಾಸ ಸೌಧ, ಬೆಂಗಳೂರು-೦೧, ದೂರವಾಣಿ- ೦೮೦-೨೨೩೮೬೦೬೩ ಅಥವಾ ೨೨೦೩೪೨೨೦ ಇಲ್ಲಿದೆ ಸಲ್ಲಿಸಬಹುದಾಗಿದೆ .

Please follow and like us:
error