ಪ್ರಗತಿಗೆ ಸಹಕಾರ ತತ್ವದ ಅಗತ್ಯವಿದೆ:ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ_ಶಾಸಕ_ರಾಘವೇಂದ್ರ_ಹಿಟ್ನಾಳಕೊಪ್ಪಳ: ಯಾವುದೇ ಕ್ಷೇತ್ರದಲ್ಲಿ ಪ್ರಗತಿಯನ್ನು ಹೊಂದಬೇಕಾದರೆ ಸಹಕಾರ ತತ್ವದ ಅಗತ್ಯವಿದೆ ಎಂದು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಬಾಗ್ಯನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೪ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತ,ಯಾವುದೇ ಒಂದು ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣಬೇಕಾದರೆ ಸಹಕಾರ ತತ್ವ ಬಹಳ ಅಗತ್ಯವಿದೆ.ಸಹಕಾರ ತತ್ವವಿದ್ದಾಗ ಮಾತ್ರ ಸಂಪೂರ್ಣ ರೀತಿಯಲ್ಲಿ ಅಭಿವೃದ್ದಿ ಹೊಂದಬಹುದು.ಸಹಕಾರ ಸಂಘಗಳು ಸದಸ್ಯರಿಗೆ ಕೇವಲ ಸಾಲ ನೀಡುವ ಸಂಸ್ಥೆಗಳಾಗದೇ ಸದಸ್ಯರ ಎಲ್ಲಾ ಕಷ್ಟ-ಸುಖಗಳಲ್ಲಿ ಸಂಪೂರ್ಣವಾಗಿ ಭಾಗಿಯಾಗಬೇಕು ಅಂದಾಗ ಮಾತ್ರ ಸಹಕಾರ ಸಂಘ ಮತ್ತು ಸದಸ್ಯರ ನಡುವೆ ಸಂಬಂಧ ಗಟ್ಟಿಯಾಗಲು ಸಾಧ್ಯವಾಗುತ್ತದೆ.ಸಂಘದ ಆಡಳಿತ ಮಂಡಳಿಯವರು ಪಾರದರ್ಶಕ ರೀತಿಯಲ್ಲಿ ಆಡಳಿತ ನಡೆಸಬೇಕು ಅಂದಾಗ ಮಾತ್ರ ಸಂಘವು ಅಭಿವೃದ್ದಿಯ ಪಥದತ್ತ ಸಾಗಲು ಸಾಧ್ಯವಾಗುತ್ತದೆ.ಶಿಕ್ಷಕರ ಬೇಡಿಕೆಗಳ ಬಗ್ಗೆ ಈಗಾಗಲೇ ಅನೇಕ ಮನವಿಗಳು ಬಂದಿದ್ದು,ಶಿಕ್ಷಕರ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಗಳ ಬಳಿ ಮಾತನಾಡಿ ಶೀಘ್ರವೇ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.ಶಿಕ್ಷಕರ ವೃತ್ತಿಯು ಪವಿತ್ರವಾದ ವೃತ್ತಿಯಾಗಿದೆ.ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ್ ಮಾತನಾಡಿ,ಸಹಕಾರ ಸಂಘಗಳು ಮಾಡುವ ಕಾರ್ಯಗಳು ಶ್ಲಾಘನೀಯವಾಗಿದ್ದು,ಸಹಕಾರ ಸಂಘಗಳಿಂದ ಪಡೆಯುವ ಸಾಲಗಳು ಸದುಪಯೋಗ ಪಡಿಸಿಕೊಳ್ಳಬೇಕು.ಸರಕಾರಿ ನೌಕರರಿಗೆ ಕೇಂದ್ರ ಸರಕಾರಿ ನೌಕರರಿಗೆ ಸರಿ ಸಮಾನವಾದ ರೀತಿಯಲ್ಲಿ ವೇತನ ನೀಡುವಂತೆ ಈಗಾಗಲೇ ಸಂಘದಿಂದ ಮನವಿ ಸಲ್ಲಿಸಲಾಗಿದ್ದು,ಮುಖ್ಯಮಂತ್ರಿಗಳು ಶೀಘ್ರವೇ ಬೇಡಿಕೆಗಳನ್ನು ಈಡೇರಿಸವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ತಿನ ಸಂಘದ ಅಧ್ಯಕ್ಷರಾದ ಮೈಲಾರಗೌಡ ಹೊಸಮನಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ,ಸರಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಾಮನಿರ್ದೇಶಿತ ರಾಜ್ಯ ಉಪಾಧ್ಯಕ್ಷರಾದ ಶಂಭುಲಿಂಗಗೌಡ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಬಸವನಗೌಡ,ಉಪಾಧ್ಯಕ್ಷರಾದ ಬಿ.ಮಂಜುನಾಥ,ತಾಲೂಕ ಅಧ್ಯಕ್ಷರಾದ ಸುರೇಶ ಅರಕೇರಿ, ಮುಂತಾದವರು ಹಾಜರಿದ್ದರು.
ಕಾರ್ಯಕ್ರಮವನ್ನು ಸಂಘದ ಖಜಾಂಚಿ ಮಹೇಶ ಟಂಕಸಾಲಿ ನಿರೂಪಿಸಿದರು.
ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರವನ್ನು ನಿರ್ದೇಶಕರಾದ ದೇವಪ್ಪ ಒಂಟಿಗಾರ ನಿರ್ವಹಿಸಿದರು.
ಉಪಾಧ್ಯಕ್ಷರಾದ ಯಶೋಧಾ ಹುನಗುಂದ ಸ್ವಾಗತಿಸಿ,ಬಾಳಪ್ಪ ಕಾಳೆ ವಂದಿಸಿದರು.

 

Please follow and like us:
error