ಭಾಗ್ಯನಗರ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ.

ಕೊಪ್ಪಳ ಮೇ.೩೦ ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಭಾಗ್ಯನಗರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಸರಕಾರ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಿದ್ದು ವಾಣಿಜ್ಯ ಚಟುವಟಿಕೆ ನಡೆಸುವ ಉದ್ದಿಮೆದಾರರು ತಮ್ಮ indexಅಂಗಡಿಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ. ಸಾರ್ವಜನಿಕರು ಸಹ ಮನೆಗಳಲ್ಲಿ ಪ್ಲಾಸ್ಟಿಕ್ ಕೈಚೀಲ ಇತ್ಯಾದಿ ವಸ್ತುಗಳನ್ನು ಬಳಸದಂತೆ ಕೋರಲಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಅನೇಕ ರೋಗ ರುಜಿನ ಹರಡುತ್ತಿದ್ದು, ಜನರ ಆರೋಗ್ಯದ ಮೇಲೆ ಪ್ಲಾಸ್ಟಿಕ್ ಬಳಕೆ ದುಷ್ಪರಿಣಾಮ ಉಂಟುಮಾಡುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪರಿಸರ(ಸಂರಕ್ಷಣೆ) ಕಾಯಿದೆ ಪ್ರಕಾರ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ಊಟದ ಮೇಜಿನ ಹಾಳೆ, ಥರ್ಮಕೋಲ್, ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಾದ ವಸ್ತುಗಳ ತಯಾರಿಕೆ, ಸರಬರಾಜು, ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮನೆಗಳಲ್ಲಿ ಹಾಗೂ ಉದ್ದಿಮೆಗಳಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ. ಉದ್ದಿಮೆದಾರರು ಪ್ಲಾಸ್ಟಿಕ್ ಸಾಮಗ್ರಿ ಬಳಸಿದಲ್ಲಿ ಅಂತಹ ಉದ್ದಿಮೆಗಳನ್ನು ಸ್ಥಗಿತಗೊಳಿಸಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Leave a Reply