ಕೊಪ್ಪಳ ತಾಲೂಕಿನ ಭಾಗ್ಯನಗರ ನೂತನ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆಸುವ ಸಂಬಂಧ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಗ್ರಾಮ ಪಂಚಾಯತಿಯಿಂದ ಉನ್ನತೀಕರಿಸಿದ ಭಾಗ್ಯನಗರ ನೂತನ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇದರನ್ವಯ ಜೂ. ೨೨ ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನೀತಿ ಸಂಹಿತೆ ಜೂ. ೨೨ ರಿಂದ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದೆ. ನಾಮಪತ್ರಗಳನ್ನು ಸಲ್ಲಿಸಲು ಜೂ. ೨೯ ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ಜೂ. ೩೦ ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜುಲೈ ೦೨ ಕೊನೆಯ ದಿನಾಂಕವಾಗಿದ್ದು, ಜುಲೈ ೧೦ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜುಲೈ ೧೩ ರಂದು ತಾಲೂಕು ಕೇಂದ್ರದಲ್ಲಿ ಜರುಗಲಿದ್ದು, ಚುನಾವಣೆ ಪ್ರಕ್ರಿಯೆ ಜುಲೈ ೧೩ ರ ಒಳಗಾಗಿ ಪೂರ್ಣಗೊಳ್ಳಲಿದೆ. ಚುನಾವಣಾ ನೀತಿ ಸಂಹಿತೆ ಜೂ. ೨೨ ರಿಂದ ಜು. ೧೩ ರವರೆಗೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಭಾಗ್ಯನಗರ ಪ.ಪಂ. ಚುನಾವಣೆ ವೇಳಾಪಟ್ಟಿ ಪ್ರಕಟ
Please follow and like us: