You are here
Home > Koppal News-1 > ಭಾಗ್ಯನಗರ ಪ.ಪಂ. ಚುನಾವಣೆ : ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

ಭಾಗ್ಯನಗರ ಪ.ಪಂ. ಚುನಾವಣೆ : ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

surreneder-weapans ಭಾಗ್ಯನಗರ ಪಟ್ಟಣ ಪಂಚಾಯತಿ ಚುನಾವಣೆ ಸಂಬಂಧ, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಭಾಗ್ಯನಗರ ಪ.ಪಂ. ವ್ಯಾಪ್ತಿಯಲ್ಲಿ ಇರುವ ಪರವಾನಿಗೆ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಇಲಾಖೆಯ ವಶಕ್ಕೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಭಾಗ್ಯನಗರ ಪ.ಪಂ. ವ್ಯಾಪ್ತಿಯಲ್ಲಿ ಇರುವ ಪರವಾನಿಗೆ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಇಲಾಖೆಯ ವಶಕ್ಕೆ ಒಪ್ಪಿಸಬೇಕು. ಶಸ್ತ್ರಾಸ್ತ್ರಗಳನ್ನು ಜುಲೈ ೧೩ ರವರೆಗೆ ವಶದಲ್ಲಿ ಇರಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Top