ಭಾಗ್ಯನಗರ ರೈಲ್ವೆಗೇಟ್ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ

ಕೊಪ್ಪkoppal_railwaygate_problem_bhagyanagar-shivaraj_tangadagi (1) koppal_railwaygate_problem_bhagyanagar-shivaraj_tangadagi (2) koppal_railwaygate_problem_bhagyanagar-shivaraj_tangadagi (3) koppal_railwaygate_problem_bhagyanagar-shivaraj_tangadagi (4) koppal_railwaygate_problem_bhagyanagar-shivaraj_tangadagi (5) koppal_railwaygate_problem_bhagyanagar-shivaraj_tangadagi (6) koppal_railwaygate_problem_bhagyanagar-shivaraj_tangadagi (7) koppal_railwaygate_problem_bhagyanagar-shivaraj_tangadagi (8) koppal_railwaygate_problem_bhagyanagar-shivaraj_tangadagi (9) koppal_railwaygate_problem_bhagyanagar-shivaraj_tangadagi (10) koppal_railwaygate_problem_bhagyanagar-shivaraj_tangadagi (11) koppal_railwaygate_problem_bhagyanagar-shivaraj_tangadagi (12)ಳ-ಭಾಗ್ಯನಗರ ಮಾರ್ಗದಲ್ಲಿ ಬರುವ ರೈಲ್ವೆ ಗೇಟ್ ಸಂಖ್ಯೆ 62 ಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶೇ. 50: 50 ರ ಅನುದಾನ ಹಂಚಿಕೆ ಆಧಾರದಡಿ 20. 32 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಬೆಂಗಳೂರಿನಿಂದ ರಿಮೋಟ್ ಮೂಲಕ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಶಂಕುಸ್ಥಾಪನೆ ನೆರವೇರಿಸಿದರೆ, ಇತ್ತ ಭಾಗ್ಯನಗರ ರೈಲ್ವೆ ಗೇಟ್ ಬಳಿ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಭಾನುವಾರದಂದು ಚಾಲನೆ ನೀಡಿದರು.
ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಶಿವರಾಜ ಎಸ್ ತಂಗಡಗಿ ಅವರು, ಬಹಳ ವರ್ಷಗಳ ಬಳಿಕ ಭಾಗ್ಯನಗರದ ಭಾಗ್ಯದ ಬಾಗಿಲು ತೆರೆಯುವ ಕಾಲ ಇದೀಗ ಕೂಡಿ ಬಂದಿದೆ.  ಅನೇಕ ಅಡ್ಡಿ ಆತಂಕಗಳನ್ನು ನಿವಾರಿಸಿ, ಸದ್ಯ ಭಾಗ್ಯನಗರ ರೈಲ್ವೆ ಗೇಟ್‍ಗೆ ಮೇಲ್ಸೇತುವೆ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗುತ್ತಿದೆ.  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಮೊದಲು ಶೇ. 75 : 25 ರ ಅನುಪಾತದಲ್ಲಿ ಹಲವು ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡುವ ವ್ಯವಸ್ಥೆ ಇತ್ತು.  ಆದರೆ ಇದೀಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಶೇ. 50 : 50 ರ ಅನುಪಾತದಲ್ಲಿ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ.  ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಕೂಡ ಒಟ್ಟು ವೆಚ್ಚದ ಶೇ. 50 ರಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ.  ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಯ   ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಿಕೆಯಲ್ಲಿ ಆದ್ಯತೆ ನೀಡುತ್ತಿದ್ದಾರೆ.  ಭಾಗ್ಯನಗರ ರೈಲ್ವೆ ಗೇಟ್‍ಗೆ ಮೇಲ್ಸೇತುವೆ ನಿರ್ಮಾಣ ಮಾಡಬೇಕು ಎನ್ನುವ ಜನರ ಬೇಡಿಕೆಯನ್ನು ಇದೀಗ ಸರ್ಕಾರ ಈಡೇರಿಸುತ್ತಿದೆ.  ಈ ಮಾರ್ಗಗದಲ್ಲಿ ಅತಿ ಹೆಚ್ಚು ವಾಹನ ಸಂಚಾರ ದಟ್ಟಣೆ ಇತ್ತು.  ಆದರೆ ರೈಲ್ವೆ ಗೇಟ್ ಸಮಸ್ಯೆಯಿಂದಾಗಿ ರೋಗಿಗಳು ಪರದಾಡುವ ಹಾಗೂ ಹೆರಿಗೆ  ಸಂದರ್ಭದಲ್ಲಿ ಮಹಿಳೆಯರು ತೀವ್ರ ತೊಂದರೆ ಅನುಭವಿಸಿದ ಅನೇಕ ಪ್ರಕರಣಗಳು ಆಗಿ ಹೋಗಿವೆ.  ಇದೀಗ ರೈಲ್ವೆ ಗೇಟ್‍ಗೆ ಮೇಲ್ಸೇತುವೆ ನಿರ್ಮಾಣವಾಗಲಿದ್ದು, ಸಾರ್ವಜನಿಕರಿಗೆ ರೈಲ್ವೆ ಗೇಟ್ ಸಮಸ್ಯೆಯಿಂದ ಶಾಶ್ವತ ಪರಿಹಾರ ದೊರೆಯಲಿದೆ.  ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ 15 ತಿಂಗಳ ಕಾಲಾವಕಾಶ ನೀಡಲಾಗಿದ್ದು, ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರು ಹೆಚ್ಚಿನ ಆದ್ಯತೆ ನೀಡಬೇಕು.  ಕುಷ್ಟಗಿ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗೆ ಫ್ಲೈಓವರ್ ನಿರ್ಮಾಣ ಮಾಡಲು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿನ ಹಲವು ಪ್ರಮುಖ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲ ಸಹಕಾರವನ್ನು ತಾವು ನೀಡುವುದಾಗಿ ಸಚಿವರು ಈ ಸಂದರ್ಭದಲ್ಲಿ ಹೇಳಿದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಸಂಸದ ಕರಡಿ ಸಂಗಣ್ಣ ಅವರು ಮಾತನಾಡಿ, ಭಾಗ್ಯನಗರ ರೈಲ್ವೆ ಗೇಟ್ ಮೇಲ್ಸೇತುವೆ ಮಂಜೂರಾತಿ ವಿಚಾರದಲ್ಲಿ ಭಾಗ್ಯನಗರದ ಹೋರಾಟ ಸಮಿತಿಯ ಪಾತ್ರ ಬಹು ಮುಖ್ಯವಾಗಿದ್ದು, ಕಾಮಗಾರಿ ಪ್ರಾರಂಭದ ಶ್ರೇಯಸ್ಸು ಹೋರಾಟ ಸಮಿತಿಗೂ ಸಲ್ಲಬೇಕು.  ಈಗಿನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೊಪ್ಪಳ ಶಾಸಕರ ಸಹಕಾರದಿಂದ ಕಾಮಗಾರಿಗೆ ಇಂದು ಚಾಲನೆ ದೊರೆತಿದೆ.  ಭಾಗ್ಯನಗರ ರೈಲ್ವೆ ಗೇಟ್‍ಗೆ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆಯು 625 ಮೀ. ಉದ್ದ, 12 ಮೀ. ಅಗಲ ಮತ್ತು 6.5 ಎತ್ತರದ ಇರಲಿದೆ.  ಈಗಾಗಲೆ ಅಗತ್ಯ ಭೂಸ್ವಾಧಿನ ಪ್ರಕ್ರಿಯೆಗೆ ಬೇಕಿರುವ 3. 93 ಕೋಟಿ ರೂ. ಗಳ ಪೈಕಿ 2. 5 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ.  ಹೈದ್ರಾಬಾದ್‍ನ ಮುರಳಿ ಕೃಷ್ಣರಾವ್ ಅವರು ಕಾಮಗಾರಿಯ ಗುತ್ತಿಗೆ ಪಡೆದುಕೊಂಡಿದ್ದು, 15 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ.  ಭವಿಷ್ಯದ ದೃಷ್ಟಿಯಿಂದ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿಕೊಡಬೇಕು ಎಂದು ಮನವಿ ಮಾಡಿದರು.  ಅಲ್ಲದೆ ಹುಬ್ಬಳ್ಳಿ-ಕೊಪ್ಪಳ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 63 ಅನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ತಿಂಗಳ ಒಳಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಇದನ್ನು ಸಿಮೆಂಟ್ ರಸ್ತೆಯನ್ನಾಗಿ ನಿರ್ಮಿಸುವ ಉದ್ದೇಶ ಹೊಂದಲಾಗಿದೆ.  ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಅಥವಾ ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ಶ್ರಮಿಸೋಣ ಎಂದರು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು.  ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದ್ರಿ, ಮಾಜಿ ಸಂಸದರುಗಳಾದ ಕೆ. ವಿರುಪಾಕ್ಷಪ್ಪ, ಶಿವರಾಮಗೌಡ, ಗಣ್ಯರಾದ ಶಿವಪ್ರಕಾಶ ಆನಂದ ಸ್ವಾಮೀಜಿ, ಸಿ.ವಿ. ಚಂದ್ರಶೇಖರ್, ವಿ.ಆರ್. ಪಾನಘಂಟಿ, ಕೃಷ್ಣ ಇಟ್ಟಂಗಿ, ಸರೋಜ ಬಾಕಳೆ, ಯಮನಪ್ಪ ಕಬ್ಬೇರ, ಶ್ರೀನಿವಾಸ ಗುಪ್ತಾ, ವಿರುಪಾಕ್ಷಪ್ಪ ಅಗಡಿ, ಮುತ್ತುರಾಜ ಕುಷ್ಟಗಿ, ಜಿ.ಪಂ. ಸದಸ್ಯ ರಾಜಶೇಖರ ಹಿಟ್ನಾಳ, ಗವಿಸಿದ್ದಪ್ಪ ಕರಡಿ ಮುಂತಾದವರು ಉಪಸ್ಥಿತರಿದ್ದರು.  ಬೆಂಗಳೂರಿನಲ್ಲಿ ನೈರುತ್ಯ ರೈಲ್ವೆ ವಿಭಾಗವು ಏರ್ಪಡಿಸಿದ್ದ ಕೊಪ್ಪಳ-ಭಾಗ್ಯನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದ ನೇರ ಪ್ರಸಾರ ವೀಕ್ಷಣೆಯ ವ್ಯವಸ್ಥೆಯನ್ನು ಭಾಗ್ಯನಗರ ರೈಲ್ವೆ ಗೇಟ್ ಬಳಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಏರ್ಪಡಿಸಲಾಗಿತ್ತು.
Please follow and like us:
error

Related posts

Leave a Comment