ಮಹಿಳಾ ದೌರ್ಜನ್ಯ ತಡೆಗಾಗಿ ದೂರು ಪೆಟ್ಟಿಗೆ: ಎಂ.ಕನಗವಲ್ಲಿ

koppl-meeting-women-child-rights: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ವಿವಿಧ ಸರಕಾರಿ ಕಚೇರಿಗಳಲ್ಲಿ ದೂರು ಪಟ್ಟಿಗೆಗಳನ್ನು ಇಡಲು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಸೂಚಿಸಿದರು.
ಅವರು ಮಹಿಳಾ ಮತ್ತು ಮಕ್ಕಳ ಇಲಾಖೆಯ ವಿವಿಧ ಸಮಿತಿಗಳಿಂದ ಹಮ್ಮಿಕೊಳ್ಳಲಾಗಿದ್ದ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಜಿಲ್ಲಾ ಸಮಿತಿ ರಚಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು.
ಕೆಲಸದ ಸ್ಥಳಗಳಲ್ಲಿ ಮಹಿಳಾ ಶೌಚಾಲಯಗಳ ಶುಚಿತ್ವ ಹಾಗೂ ಭದ್ರವಾಗಿರಬೇಕು. ಮಹಿಳೆಯು ತಾನು ಕೆಲಸ ಮಾಡುತ್ತಿರುವ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಲ್ಲಿ ದೂರು ಪೆಟ್ಟಿಗೆಯಲ್ಲಿ ದೂರನ್ನು ಸಲ್ಲಿಸಬಹುದು ಅಥವಾ ಖುದ್ದಾಗಿ ಸಮಿತಿಯ ಮುಂದೆ ದೂರು ಸಲ್ಲಿಸಬಹುದು. ಪ್ರತಿ ವಾರ ದೂರು ಪೆಟ್ಟಿಗೆಯನ್ನು ಸಮಿತಿಯ ಸರ್ವ ಸದಸ್ಯರ ಮುಂದೆ ತೆರೆದು ದೂರುಗಳ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಪ್ರತಿ ಮೂರು ತಿಂಗಳಿಗೊಮ್ಮೆ ಸರ್ವ ಸದಸ್ಯರ ಸಭೆ ಕರೆದು ಪರಿಶೀಲನೆ ಮಾಡಲಾಗುವುದು.
ಮಹಿಳೆಯರ ಮತ್ತು ಮಕ್ಕಳ ವಿಷಯದಲ್ಲಿ ಬರಬಹುದಾದ ಬಾಲ್ಯ ವಿವಾಹ, ಶಿಶುಮಾರಾಟ, ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ, ಲೈಂಗಿಕ ಕಿರುಕುಳ, ದೇವದಾಸಿ ಪದ್ದತಿ ಅನುಸರಣೆ, ಬೆತ್ತಲೆ ಸೇವೆ ಮುಂತಾದ ವಿಷಯಗಳ ಸಮಸ್ಯೆಗಳನ್ನು ಪರಿಶೀಲಿಸಿ, ಪರಿಣಾಮಕಾರಿಯಾಗಿ ಇತ್ಯರ್ಥ ಪಡಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚನೆಗೆ ಸರಕಾರ ಆದೇಶಿಸಿದೆ ಎಂದರು.
ಜಿಲ್ಲಾ ಮಟ್ಟದ ಸಮಿತಿ ವಿವರ: ಜಿಲ್ಲಾಧಿಕಾರಿ ಅಧ್ಯಕ್ಷರು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಂಆಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ, ಜಿಲ್ಲಾ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಜಿಲ್ಲಾಧಿಕಾರಿಗಳು ನೇಮಿಸಲ್ಪಟ್ಟ ಜಿಲ್ಲೆಯ ೨ ಸಂಸ್ಥೆಗಳ ತಲಾ ಒಬ್ಬ ಪ್ರತಿನಿಧಿಗಳು ಸಮಿತಿಯ ಸದಸ್ಯರು, ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಿತಿಯ ಸದಸ್ಯ ಕಾರ್ಯದರ್ಶಿ ಗಳನ್ನೊಳಗೊಂಡಿರುತ್ತದೆ ಎಂದರು.
ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಸ್ಥೆಯ ಸದಸ್ಯರುಗಳಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕಲಾದಗಿ, ಆರೋಗ್ಯ ಇಲಾಖೆಯ ಡಾ.ರಮೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಮಂಜುನಾಥ ಹಾಗೂ ವಿವಿಧ ಇಳಾಖೆಯ ಅಧಿಕಾರಿಗಳು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

Leave a Comment