ಮಾಜಿ ಸಚಿವ ಶಿವರಾಜ ತಂಗಡಗಿ ತಂದೆ ಸಂಗಪ್ಪ ತಂಗಡಗಿ ನಿಧನ

sangappa_tangadagi

ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಶಿವರಾಜ ತಂಗಡಗಿ ಅವರ ತಂದೆ ಸಂಗಪ್ಪ ಶಿವನೆಪ್ಪ ತಂಗಡಗಿ(80) ಭಾನುವಾರ ರಾತ್ರಿ 10.45 ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ ಪತ್ನಿ, ಶಾಸಕ ಶಿವರಾಜ ತಂಗಡಗಿ ಸೇರಿದಂತೆ ಐದು ಜನ ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಅಪಾರ ಬಂಧು ಬಳಗ ಇದೆ. ಸೋಮವಾರ ಬಾಗಲಕೋಟೆ ಜಿಲ್ಲೆಯ ಇಲಕಲ್ ನಗರದಲ್ಲಿ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply