You are here
Home > Koppal News-1 > ಮಾರ್ಚ್ ೦೧ ರಂದು ಜಿಲ್ಲಾ ಮಟ್ಟದ ಯುವಜನ ಮೇಳ ಕಾರ್ಯಕ್ರಮ

ಮಾರ್ಚ್ ೦೧ ರಂದು ಜಿಲ್ಲಾ ಮಟ್ಟದ ಯುವಜನ ಮೇಳ ಕಾರ್ಯಕ್ರಮ

ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನ ಮೇಳ ಕಾರ್ಯಕ್ರಮವನ್ನು ತಾಲೂಕಿನ ಕಾತರಕಿ-ಗುಡ್ಲಾನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾರ್ಚ್.೦೧ ರಂದು ಬೆಳಿಗ್ಗೆ ೯.೩೦ ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾವಗೀತೆ, ಜಾನಪದ ಗೀತೆ, ರಂಗಗೀತೆ, ಜಾನಪದ ನೃತ್ಯ, ಗೀಗಿ ಪದಗಳು, ಲಾವಣಿ, ಕೋಲಾಟ, ಭಜನೆ, ಜೋಳ-ರಾಗಿ ಬೀಸುವ ಪದ, ಸೋಬಾನ ಪದಗಳು, ಏಕಪಾತ್ರಾಭಿನಯ, ವೀರಗಾಸೆ ಪುರವಂತಿಕೆ, ಡೋಳ್ಳು ಕುಣಿತ, ದೊಡ್ಡಾಟ, ಸಣ್ಣಾಟ, ಚರ್ಮವಾದ್ಯ ಮೇಳ, ಯಕ್ಷಗಾನ ಸೇರಿದಂತೆ ಒಟ್ಟು ೧೭ ಸ್ಪರ್ಧೆಗಳನ್ನು ನಡೆಸಲಾಗುವುದು.
ಕೊಪ್ಪಳ ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ದೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಯುವಕ-ಯುವತಿಯರು ಮಾತ್ರ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಬಹುದು. ಸ್ಪರ್ದಾಳುಗಳು ತಮ್ಮ ವೇಶ ಭೂಷಣ, ವಾದ್ಯ ಮೇಳಗಳೊಂದಿಗೆ ಮಾ.೦೧ ರಂದು ಬೆಳಿಗ್ಗೆ ೯.೦೦ ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಾಡಿಕೊಂಡು ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ವಯೋಮಿತಿ ೧೫ ರಿಂದ ೩೫ ವರ್ಷದೊಳಗಿರಬೇಕು.
ಭಾಗವಹಿಸುವ ಅರ್ಹ ಸ್ಪರ್ಧಾಳುಗಳಿಗೆ, ಆಯಾ ತಾಲ್ಲೂಕು ಕೇಂದ್ರ ಸ್ಥಾನದಿಂದ ಸಂಘಟನೆ ನಡೆಯುವ ಕೇಂದ್ರ ಸ್ಥಾನಕ್ಕೆ ಬಂದು ಹೋಗುವ ಸಾಮಾನ್ಯ ಬಸ್ ದರವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಘಟಕರ ಮೊಬೈಲ್ ಸಂಖ್ಯೆ ೯೭೩೧೯೧೮೧೭೬, ೯೯೮೦೬೭೫೨೦೯ ಅಥವಾ ಕೊಪ್ಪಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.

Leave a Reply

Top