ಮೇ. ೧೩ ರಂದು ಅರ್ಥಪೂರ್ಣ ಭಗೀರಥ ಜಯಂತಿ ಆಚರಣೆ- ಡಾ. ಪ್ರವೀಣ.

ಮೇ. ೦೫  ಜಿಲ್ಲಾ ಆಡಳಿತ ವತಿಯಿಂದ ಮೇ. ೧೩ ರಂದು ಜಿಲ್ಲಾ ಕೇಂದ್ರದಲ್ಲಿ ಭಗೀರಥ ಮಹರ್ಷಿ ಅವರ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಹೇಳಿದರು.ಭಗೀರಥ ಜಯಂತಿ ಆಚರಣೆ ಸಂಬಂಧ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸದ್ಯ ಬರ ಪರಿಸ್ಥಿತಿ ತಲೆದೋರಿದೆ. ಜಿಲ್ಲೆಯಲ್ಲಿ ನೀರಿನ ಸಮಸ್ಯೆಯೂ ಕಾಡುತ್ತಿದೆ. ಭಗೀರಥ ಮಹರ್ಷಿಗಳ ಜಯಂತಿ ಆಚರಣೆ ಸಂದರ್ಭದಲ್ಲಿ ನೀರಿನ ಮಹತ್ವದ ಕುರಿತು ನಾವು ಸಾರ್ವಜನಿಕರಲ್ಲಿ ಅರಿವು ಮೂDSC_0679ಡಿಸುವುದು, ಅಲ್ಲದೆ ಜಿಲ್ಲೆಯಲ್ಲಿ ನೀರಿನ ಸದ್ಬಳಕೆ ಮಾಡಿಕೊಂಡು, ಇತರರಿಗೂ ಮಾದರಿಯಾಗಿರುವಂತಹ ವ್ಯಕ್ತಿಗಳನ್ನು ಗುರುತಿಸಿ ಜಯಂತಿ ಆಚರಣೆ ಸಂದರ್ಭದಲ್ಲಿ ಸನ್ಮಾನಿಸಲು ಉದ್ದೇಶಿಸಲಾಗಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ನಿಜವಾಗಿ ನಾವು ಭಗೀರಥ ಮಹರ್ಷಿಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಹೇಳಿದರು.ಭಗೀರಥ ಮಹರ್ಷಿ ಜಯಂತಿ ಅಂಗವಾಗಿ ಮೇ. ೧೩ ರಂದು ಬೆಳಗ್ಗೆ ೮ ಗಂಟೆಗೆ ಸಿರಸಪ್ಪಯ್ಯನ ಮಠದಿಂದ ಭಗೀರಥ ಮಹರ್ಷಿ ಭಾವಚಿತ್ರದ ಮೆರವಣಿಗೆ ಆರಂಭಗೊಂಡು ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪಲಿದೆ. ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆ ಆಕರ್ಷಕಗೊಳಿಸಲಿವೆ. ಅಂದು ಬೆಳಗ್ಗೆ ೧೧ ಗಂಟೆಗೆ ಸಾಹಿತ್ಯ ಭವನದಲ್ಲಿ ಜಯಂತ್ಯೋತ್ಸವ ಸಮಾರಂಭ ಜರುಗಲಿದೆ. ಮೆರವಣಿಗೆಗೆ ಎಲ್ಲಾ ಸಮಾಜ ಬಾಂಧವರು, ಸಾರ್ವಜನಿಕರು ಮೆರವಣಿಗೆ ಹಾಗೂ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲ್ಗೊಳ್ಳಬೇಕು. ನಗರದ ಪ್ರಮುಖ ವೃತ್ತಗಳಿಗೆ ದೀಪ ಅಲಂಕಾರ ಹಾಗೂ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳಬೇಕು. ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಕುಡಿವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ, ಗಣ್ಯರಾದ ಹನುಮಾಕ್ಷಿ ಗೋಗಿ, ಕನಕಪ್ಪ ಮುಂಡರಗಿ, ಶಿವಾನಂದ ಹೊದ್ಲೂರ, ಮಂಜುನಾಥ ಗೊಂಡಬಾಳ, ಡಾ. ಮಹಾಂತೇಶ್ ಮಲ್ಲನಗೌಡರ, ಸಂಧ್ಯಾ ಮಾದಿನೂರ, ಮುಂತಾದವರು ಭಾಗವಹಿಸಿದ್ದರು.

Please follow and like us:
error

Related posts

Leave a Comment