ಮೇ.೧೩ ರಂದು ಕೊಪ್ಪಳದಲ್ಲಿ ಜವಳಿ ಆಧಾರಿತ ಉದ್ಯಮಶೀಲತಾ ಅಭಿವೃದ್ಧಿ ಕಾಯಾಗಾರ

ಕೈಮಗ್ಗ ಮತ್ತು ಜವಳಿ ಇಲಾಖೆ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ್ ಇವರುಗಳ ಸಹಯೋಗದಲ್ಲಿ ಒಂದು ದಿನದ ಜವಳಿ ಆಧಾರಿತ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಾಗಾರ ಮೇ.೧೩ ರಂದು ಬೆಳಗ್ಗೆ ೧೧ ಗಂಟೆಗೆ ಕೊಪ್ಪಳದ ಕೃಷಿ ವಿಷ್ತರಣಾ ಕೇಂದ್ರದ ಆವರಣದಲ್ಲಿ ಏರ್ಪಡಿಸಲಾಗಿದೆ.
ಜಿಪಂ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು. ರಾಯಚೂರು ಕೃಷಿ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಪಿ.ಎಂ ಸಾಲಿಮಠ, ಕೈಮಗ್ಗ ಮತ್ತು ಜವಳಿ ಇಲಾಖೆ ಬಳ್ಳಾರಿ ಉತ್ತರ ವಲಯ ಜಂಟಿ ನಿರ್ದೇಶಕ ಶ್ರೀಧರ ನಾಯಕ, ಬಳ್ಳಾರಿ ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಕೆ.ಭೀಮಪ್ಪ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸೂರ್ಯಪ್ರಕಾಶ ರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು

Leave a Reply