ಮೇ. ೩೦ ರಂದು ಕೊಪ್ಪಳದಲ್ಲಿ ಡೆಂಗ್ಯೂ ಜಾಗೃತಿ ಜಾಥಾ.

ಕೊಪ್ಪಳ ಮೇ. ೨೯ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಜನ ಸಮುದಾಯದಲ್ಲಿ ಡೆಂಗ್ಯು ರೋಗ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೇ. ೩೦ ರಂದು ಬೆಳಿಗ್ಗೆ ೮-೩೦ ಗಂಟೆಗೆ ಕೊಪ್ಪಳದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕೊಪ್ಪಳ ನಗರದ ಹಳೆಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆ ೮-೩೦ ಗಂಟೆಗೆ ಡೆಂಗ್ಯೂ ಜಾಗೃತಿ ಜಾಥಾಕ್ಕೆ ಚಾಲನೆ ದೊರೆಯಲಿದ್ದು, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಮುಂತಾದವರು ಪಾಲ್ಗೊಳ್ಳುವರು. ಡೆಂಗ್ಯೂ ಜ್ವರದ ಹರಡುವಿಕೆ, ನಿಯಂತ್ರಣ ಹಾಗೂ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನಸಮುದಾಯವನ್ನು ಜಾಗೃತಗೊಳಿಸಲು ಈ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.Fever-12-5

Leave a Reply