ಮೇ. ೯ ರಂದು ಬಸವೇಶ್ವರರ ಜಯಂತಿ ಆಚರಣೆ

basaweshwar-jayanti-1 basaweshwar-jayanti-2ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ಮೇ. ೦೯ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜರುಗಲಿದೆ.
ಜಯಂತಿ ಆಚರಣೆ ಅಂಗವಾಗಿ ಮೇ. ೦೯ ರಂದು ಸಂಜೆ ೪ ಗಂಟೆಗೆ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಗರದ ಕೋಟೆ ರಸ್ತೆಯ ಮಹೇಶ್ವರ ದೇವಸ್ಥಾನದಿಂದ ಹೊರಟು, ಜವಾಹರ ರಸ್ತೆ, ಮೂಲಕ ಗವಿಮಠ ಆವರಣದವರೆಗೆ ನೆರವೇರಲಿದೆ. ಅಂದು ಸಂಜೆ ೦೬ ಗಂಟೆಗೆ ಗವಿಮಠ ಆವರಣದಲ್ಲಿ ಸಮಾರಂಭ ಜರುಗಲಿದ್ದು, ಸಂಸ್ಥಾನ ಶ್ರೀ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿ.ಪಂ. ಅಧ್ಯಕ್ಷ ಶೇಖರಪ್ಪ ಬಿ. ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನಿವೃತ್ತ ಐಎಎಸ್ ಅಧಿಕಾರಿ ಡಾ. ಎಸ್.ಎಂ. ಜಾಮದಾರ್ ಅವರಿಂದ ಇದೇ ಸಂದರ್ಭದಲ್ಲಿ ಬಸವ ಚಿಂತನೆ ಕಾರ್ಯಕ್ರಮ ಜರುಗಲಿದೆ. ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ ತಿಳಿಸಿದ್ದಾರೆ.

Related posts

Leave a Comment