ರೈತ ಫಲಾನುಭವಿಗಳಿಗೆ ಸೌಜನ್ಯಯುತ ಒಳ್ಳೆಯ ಆತಿಥ್ಯ ನೀಡಿ- ಡಿ.ಸಿ. ಕನಗವಲ್ಲಿ ಸೂಚನೆ

raita-samavesha-koppal-cm-siddaramayyaಕೃಷಿ ಭಾಗ್ಯ ಯೋಜನೆ ಸಮರ್ಪಣೆ, ಹಾಗೂ ಸ್ವಾವಲಂಬಿ, ಸ್ವಾಭಿಮಾನ ರೈತ ಸಮಾವೇಶಕ್ಕಾಗಿ ಕೊಪ್ಪಳ ಜಿಲ್ಲೆಗೆ ಆ. ೨೯ ರಂದು ಆಗಮಿಸುತ್ತಿರುವ ಉತ್ತರ ಕರ್ನಾಟಕದ ಜಿಲ್ಲೆಗಳ ರೈತರಿಗೆ ಕೊಪ್ಪಳದಲ್ಲಿ ಎಲ್ಲ ಅಧಿಕಾರಿಗಳು, ಪೊಲೀಸರು, ಸಿಬ್ಬಂದಿಗಳು ಸೌಜನ್ಯಯುತ ಆತಿಥ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತ ಫಲಾನುಭವಿಗಳ ಸಮಾವೇಶದ ಅಂತಿಮ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಕೃಷಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯದಲ್ಲಿಯೇ ಇದೇ ಮೊಟ್ಟ ಮೊದಲ ಬಾರಿಗೆ ಆ. ೨೯ ರಂದು ಕೊಪ್ಪಳದಲ್ಲಿ ಆಯೋಜಿಸಲಾಗುತ್ತಿರುವ ಕೃಷಿ ಭಾಗ್ಯ ಯೋಜನೆಯ ಸ್ವಾವಲಂಬಿ ಸ್ವಾಭಿಮಾನಿ ರೈತರ ಸಮಾವೇಶಕ್ಕೆ ಉತ್ತರ ಕರ್ನಾಟಕದ ೧೨ ಜಿಲ್ಲೆಗಳ ರೈತರು ಕೊಪ್ಪಳಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲೆಗೆ ಬರುವ ರೈತರು ಕೊಪ್ಪಳ ಜಿಲ್ಲೆಯ ಅತಿಥಿಗಳಾಗಿರುವುದರಿಂದ, ರೈತರೊಂದಿಗೆ ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸರು ಸೌಜನ್ಯಯುತವಾಗಿ ವರ್ತಿಸಬೇಕು. ಒಳ್ಳೆಯ ಮಾತುಗಳನ್ನಾಡಿ, ಒಳ್ಳೆಯ ಆತಿಥ್ಯ ನೀಡಿ. ಜಿಲ್ಲೆಯಿಂದ ತೆರಳುವ ರೈತರು, ಕೊಪ್ಪಳದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಕಟ್ಟಿಕೊಂಡು ತೆರಳುವಂತಾಗಬೇಕು. ಕೃಷಿ ಇಲಾಖೆ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಮತ್ತಿತರೆ ಇಲಾಖೆಗಳು ಕೃಷಿಕರಿಗಾಗಿ ಇರುವ ಯೋಜನೆಗಳ ಬಗ್ಗೆ ಹಾಗೂ ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳುವ ಬಗೆಯನ್ನು ತಾಂತ್ರಿಕತೆಯ ವಿವರದೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾನುವಾರವೇ ಸಿದ್ಧತೆ ಪೂರ್ಣಗೊಳಿಸಿ : ರೈತ ಫಲಾನುಭವಿಗಳ ಸಮಾವೇಶಕ್ಕೆ ಈಗಾಗಲೆ ಕೊಪ್ಪಳ-ಹೊಸಪೇಟೆ ರಸ್ತೆಯಲ್ಲಿನ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ, ಪ್ರಾತ್ಯಕ್ಷಿಕೆಯ ಮೈದಾನ, ಮಳಿಗೆಗಳು ಸೇರಿದಂತೆ ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವರು ಹಾಗೂ ಕೃಷಿ ಸಚಿವರು ಭಾನುವಾರದಂದು ಕೊಪ್ಪಳಕ್ಕೆ ಆಗಮಿಸಿ, ಸಮಾವೇಶದ ಅಂತಿಮ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ. ಹೀಗಾಗಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಭಾನುವಾರದಂದು ಸಮಾವೇಶ ಸ್ಥಳಕ್ಕೆ ಆಗಮಿಸಿ, ತಮಗೆ ವಹಿಸಿರುವ ಜವಾಬ್ದಾರಿಯ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು. ಭಾನುವಾರದಂದೇ ಸಮಾವೇಶದ ಅಂತಿಮ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಮರ್ಪಕ ಊಟದ ವ್ಯವಸ್ಥೆಗೆ ಸೂಚನೆ : ರೈತ ಫಲಾನುಭವಿಗಳ ಸಮಾವೇಶಕ್ಕೆ ಉತ್ತರ ಕರ್ನಾಟಕದ ೧೨ ಜಿಲ್ಲೆಗಳ ಸುಮಾರು ೨೫ ರಿಂದ ೩೦ ಸಾವಿರ ರೈತರು ಜಿಲ್ಲೆಗೆ ಆಗಮಿಸಲಿದ್ದು, ಸಮಾವೇಶದ ಸ್ಥಳಕ್ಕೆ ಹತ್ತಿರದಲ್ಲಿ ಎಲ್ಲ ರೈತರಿಗೆ ಸಮರ್ಪಕವಾಗಿ ಊಟದ ವ್ಯವಸ್ಥೆ ಕೈಗೊಳ್ಳಬೇಕು. ವ್ಯವಸ್ಥೆಯು ಅಚ್ಚುಕಟ್ಟಾಗಿರಬೇಕು. ಒಳ್ಳೆಯ ಊಟ ಒದಗಿಸಬೇಕು. ಸೂಕ್ತ ಕುಡಿಯುವ ನೀರಿನ ವ್ಯವಸ್ಥೆಗೊಳಿಸಬೇಕು. ಇದಕ್ಕಾಗಿ ಊಟ ಪೂರೈಕೆಯ ಕನಿಷ್ಟ ೮೦ ರಿಂದ ೧೦೦ ಕೌಂಟರ್‌ಗಳನ್ನು ಸ್ಥಾಪಿಸಿ, ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಪೊಲೀಸ್ ಬಂದೋಬಸ್ತ್ : ಸಮಾವೇಶ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತ ಫಲಾನುಭವಿಗಳು ಹಾಗೂ ಸಾರ್ವಜನಿಕರು ಸೇರುವುದರಿಂದ, ಜನರಿಗೆ ಯಾವುದೇ ಗೊಂದಲ ಉಂಟಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ವಾಹನ ಸಂಚಾರ ದಟ್ಟಣೆಯಾಗಿ ಟ್ರಾಫಿಕ್‌ಜಾಮ್ ಆಗದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾದಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾ

Leave a Reply