ವಿಜ್ಞಾನ ಮುಂದುವರಿದಂತೆ ಖಾಯಿಲೆಗಳೂ ಪ್ರಭಾವ ಹೆಚ್ಚಿಸಿಕೊಳ್ಳುತ್ತಿವೆ – ಪ್ರಕಾಶ ಬಡಿಗೇರ.

ಕೊಪ್ಪಳ, ಏ.೧೬ ಪ್ರಸ್ತುತ ದಿನಮಾನದಲ್ಲಿ ವಿಜ್ಞಾನ ಮುಂದುವರೆದಂತೆ, ಖಾಯಿಲೆಗಳೂ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿವೆ ಎಂದು ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರಕಾಶ ಬಡಿಗೇರ ಅಭಿಪ್ರಾಯಪಟ್ಟರು.  ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಗವಿಸಿದ್ದೇಶ್ವರ ಶಿಕ್ಷಣ ಮಾಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವ ಆರೋಗ್ಯ ದಿನಾಚರಣೆ ಪ್ರತಿ ವರ್ಷ ಆಚರಿಸಲಾಗುತ್ತಿದೆ. ಈ ವರ್ಷ ‘ಮಧು ಮೇಹ ಏರಿಕೆಯನ್ನು ನಿಲ್ಲಿಸೋಣ ಹಾಗೂ ತಡೆಗಟ್ಟೋಣ’ ಎಂಬ ಘೋಷವಾಕ್ಯದಡಿ ಆಚರಿಸಲಾಗುತ್ತಿದೆ. ಜಗತ್ತಿನಲ್ಲಿ ವಿಜ್ಞಾನ ಮುಂದುವರೆದಂತೆ, ರೋಗಗಳು ಸಹ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿವೆ. ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳು ಭಾವಿ ಶಿಕ್ಷಕರ ವೃತ್ತಿ ಬದುಕಿ01ನಲ್ಲಿ ಅತ್ಯಂತ ಮಹತ್ವವನ್ನು ಪಡೆದುಕೊಳ್ಳುತ್ತವೆ ಎಂದು ಹೇಳಿದರಲ್ಲದೆ, ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಬೇಕು ವೈದ್ಯರು ಹೇಳಿದ ಸಲಹೆಗಳನ್ನ ತಪ್ಪದೇ ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.  ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಮ್ಯುನಿಟಿ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಯುವರಾಜ ಅವರು ಸಸಿಗಳಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಕ್ಕರೆ ಖಾಯಿಲೆ ಎಂದರೇನು, ಹೇಗೆ ಹರಡುತ್ತದೆ ಅದರ ಲಕ್ಷಣಗಳ ಕುರಿತು ಹಾಗೂ ಖಾಯಿಲೆ ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದಾನರೆಡ್ಡಿ ಮಾತನಾಡಿ ಇಂದಿನ ಜೀವನ ಶೈಲಿಯಲ್ಲಿ ದೈಹಿಕ ಶ್ರಮಕ್ಕೆ ಆದ್ಯತೆ ಇಲ್ಲ. ಇದರಿಂದಾಗಿ ಬಹಳಷ್ಟು ಜನ ಸಕ್ಕರೆ ಖಾಯಿಲೆಗೆ ಒಳಗಾಗುತ್ತಿದ್ದಾರೆ. ಜೀವನ ಶೈಲಿ, ಆಹಾರ ಪದ್ದತಿಗಳ ವ್ಯತ್ಯಾಸದಿಂದಾಗಿ ಸಕ್ಕರೆ ಖಾಯಿಲೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ ಎಂದು ಅಭಿಪ್ರಾಯ ಪಟ್ಟರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದಲ್ಲಿ ಸಕ್ಕರೆ ಖಾಯಿಲೆಯಿಂದ ಲಕ್ಷಗಟ್ಟಲೆ ಜನರು ಸಾವನ್ನಪ್ಪುತ್ತಿದ್ದು ಇದನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮಗಳ ಅವಶ್ಯಕತೆ ಹೆಚ್ಚಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀಕಾಂತ ಬಾಸೂರ, ಡಾ. ಶರಣಕುಮಾರ, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕ ಮಹಾದೇವಯ್ಯ ಹಿರೇಮಠ ಉಪಸ್ತಿತರಿದ್ದರು.

Please follow and like us:
error