ವಿವಿಧೆಡೆ ಕಾರ್ಮಿಕ ಇಲಾಖೆ ದಾಳಿ ನಾಲ್ವರು ಬಾಲಕಾರ್ಮಿಕರ ಪತ್ತೆ.

ಕೊಪ್ಪಳ ಮೇ. ೧೭ ಕಾರ್ಮಿಕ ಇಲಾಖೆ ಅಧಿಕಾರಿಗಳು, ಮಂಗಳವಾದಂದು ಕೊಪ್ಪಳ ನಗರದ ವಿವಿಧೆಡೆ ದಾಳಿ ನಡೆಸಿ, ನಾಲ್ವರು ಬಾಲಕಾರ್ಮಿಕರನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಯಿತು. ಕೊಪ್ಪಳ ನಗರದ ಹೋಟೆಲ್, ಗ್ಯಾರೇಜ್ ವಿವಿಧೆಡೆ ದಾಳಿ ನಡೆಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು ನಾಲ್ವರು ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ, ಆರೈಕೆ ಮತ್ತು ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿತು. ಅಲ್ಲದೆ ಮಕ್ಕಳ ಮನೆಗಳಿಗೆ ತೆರಳಿ, ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ಕಳುಹಿಸದಂತೆ ತಾಕೀತು ಮಾಡಲಾಯಿತು. Child labour raid

Please follow and like us:
error

Related posts

Leave a Comment