ಸಚಿವ ಸಂಪುಟ ಉಪ ಸಮಿತಿಗೆ ಘೇರಾವೋ ಹಾಕಿದ ಗ್ರಾಮಸ್ಥರು

ಸಚಿವ ಸಂಪುಟ ಉಪ hk_patil_minister_draought hk_patil_minister_draought-basavaraj_rayareddy_yelburga hk_patil_minister_draought-basavaraj_rayareddy_yelburga_gheravoಸಮಿತಿಯು ತಾಲೂಕಿನ ಲೇಬಗೇರಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿತು. ಲೇಬಗೇರಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆ ಇದ್ದು, ಕೂಡಲೆ ಪರಿಹರಿಸುವಂತೆ ಸಾರ್ವಜನಿಕರು ಸಚಿವರ ತಂಡಕ್ಕೆ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಎಚ್.ಕೆ. ಪಾಟೀಲರು, ಶನಿವಾರದಿಂದಲೇ ಟ್ಯಾಂಕರ್ ಮೂಲಕ, ದಿನಕ್ಕೆ ಎರಡು ಟ್ರಿಪ್ ನಂತೆ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು. ಅಲ್ಲದೆ ಇಲ್ಲಿನ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ ಸಮರ್ಪಕವಾಗಿ ಜರುಗುತ್ತಿಲ್ಲ. ಸಂಬಂಧಿಸಿದ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಲೇಬಗೇರಿ ವ್ಯಾಪ್ತಿಯ ಗ್ರಾಮ ಲೆಕ್ಕಿಗ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ದೂರುಗಳು ಕೇಳಿ ಬಂದ ಕಾರಣ, ಗ್ರಾಮ ಲೆಕ್ಕಿಗರನ್ನು ಅಮಾನತುಗೊಳಿಸುವಂತೆ ಸಚಿವರು ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು, ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಚಿವ ಸಂಪುಟ ಉಪ ಸಮಿತಿಯ ಸದಸ್ಯರುಗಳೂ ಆಗಿರುವ ರಾಜ್ಯ ಪೌರಾಡಳಿತ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಖಮರುಲ್ ಇಸ್ಲಾಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಗ್ರಾಮ ಭೇಟಿಯಲ್ಲಿ ಪಾಲ್ಗೊಂಡಿದ್ದರು.

Please follow and like us:
error