ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ದೂರು ದಾಖಲಿಸಿ -ರಾಯರಡ್ಡಿ

koppal_basavaraj_rayareddy_dc_koppalಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ಭೀತಿಯಿಂದ ಕೈಗೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನಿಷ್ಠೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳಿಗೇ ಇತ್ತೀಚೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರನ್ನು ಹೆದರಿಸುವ ಘಟನೆಗಳು ಜರುಗಿವೆ. ಅಲ್ಲದೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೂ ಸಹ ಇಂತಹದೇ ಅನುಭವಗಳಾಗುತ್ತಿವೆ. ಹೀಗಾಗಿ ಅಧಿಕಾರಿಗಳು ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವ ರೀತಿ ವಾತಾವರಣವನ್ನು ಜಿಲ್ಲೆಯಲ್ಲಿ ಒದಗಿಸುವ ಅಗತ್ಯವಿದೆ ಎಂದು ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ರೀತ್ಯ ದೂರು ದಾಖಲಿಸಿ, ಅಂತಹವರು ಶಿಕ್ಷೆಗೆ ಗುರಿಯಾಗುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳನ್ನು ಬೆದರಿಸುವ ಮೂಲಕ ಒತ್ತಡ ಹೇರುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಹಾಗೂ ಅಂತಹವರಿಗೆ ಯಾರೂ ಕೂಡ ಬೆಂಬಲ ನೀಡಬಾರದು ಎಂದು ರಾಯರಡ್ಡಿ ಹೇಳಿದರು.

Leave a Reply