ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಪ್ಪಳ ಜಿಲ್ಲೆಯಲ್ಲಿ ಈ.ಕ.ರ.ಸಾ.ಸಂಸ್ಥೆ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜು. ೨೬ ರಂದು ಸಹ ರಜೆಯನ್ನು ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ತೊಂದರೆಯಾಗಲಿದ್ದು, ಜು. ೨೫ ರಂದು ಒಂದು ದಿನದ ರಜೆಯನ್ನು ಘೋಷಿಸಲಾಗಿತ್ತು. ಇದೀಗ ಮುಷ್ಕರ ಮುಂದುವರೆದಿರುವ ಕಾರಣದಿಂದ ಜು. ೨೬ ರಂದು ರಜೆಯನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Please follow and like us: