You are here
Home > Koppal News-1 > ಸಿಂಗಟಾಲೂರು ಏತ ನೀರಾವರಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ : ಸಾರ್ವಜನಿಕ ಅಹವಾಲು ಸ್ವೀಕಾರ

ಸಿಂಗಟಾಲೂರು ಏತ ನೀರಾವರಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ : ಸಾರ್ವಜನಿಕ ಅಹವಾಲು ಸ್ವೀಕಾರ

ಸಿಂಗಟಾಲೂರು ಏತ ನೀರಾವರಿ ಯೋಜನೆ ಮುಂಡರಗಿ ಶಾಖಾ ಕಾಲುವೆ ನಿರ್ಮಾಣಕ್ಕಾಗಿ ಕೊಪ್ಪಳ ತಾಲೂಕಿನ ಕವಲೂರು ಹಾಗೂ ಗುಡಿಗೇರಿ ಗ್ರಾಮಗಳ ಜಮೀನು ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ಬಾಧಿತಗೊಳ್ಳುವ ಕುಟುಂಬದ ಸದಸ್ಯರುಗಳ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಡಿ. ೦೧ ರಂದು ಬೆಳಿಗ್ಗೆ ೧೦ ಗಂಟೆಗೆ ಕವಲೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ತಾಲೂಕಿನ ಕವಲೂರು ಮತ್ತು ಗುಡಗೇರಿ ಗ್ರಾಮಗಳ ಜಮೀನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣದ ಕಾಯ್ದೆಯನ್ವಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕರಡು ಯಾದಿಯನ್ನು ತಯಾರಿಸಲು ಸಾರ್ವಜನಿಕ ಅಹವಾಲು ಕಾರ್ಯಕ್ರಮ ಡಿ.೦೧ ರಂದು ಬೆಳಿಗ್ಗೆ ೧೦ ಗಂಟೆಗೆ ಕವಲೂರು ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ನಡೆಯಲಿದೆ. ಪ್ರಸ್ತಾಪಿತ ಜಮೀನುಗಳ ಭೂಮಾಲಿಕರ ಬಾದಿತಗೊಳ್ಳುವ ಕುಟುಂಬದ ಎಲ್ಲ ವಯಸ್ಕ ಸದಸ್ಯರು ಸಾರ್ವಜನಿಕ ಅಹವಾಲು ಕಾರ್ಯಕ್ರಮಕ್ಕೆ ಹಾಜರಾಗಿ ತಮ್ಮ ಕ್ಲೇಮುಗಳು ಹಾಗೂ ಆಕ್ಷೇಪಣೆಗಳಿದ್ದಲ್ಲ್ಲಿ ಲಿಖಿತವಾಗಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ತಿಳಿಸಿದ್ದಾರೆ.

Leave a Reply

Top