ಸಿಇಟಿ ಪರೀಕ್ಷೆ ಕೈಗಡಿಯಾರ ಹಾಗೂ ಎಲೆಕ್ಟ್ರಾನಿಕ್ ಉಪಕರಣ ನಿಷೇಧ.

ಕೊಪ್ಪಳ ಮೇ. ೦೩  ಕೊಪ್ಪಳ ನಗರದ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಮೇ. ೦೪ ಮತ್ತು ೦೫ ರಂದು ನಡೆಯಲಿರುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಕೈಗಡಿಯಾರ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ. ಕೊಪ್ಪಳ ನಗರದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು, ಗವಿಸಿದ್ದೇಶ್ವರ ಪದವಿಪೂರ್ವ ಕಾಲೇಜು ಹಾಗೂ ಬಸಮ್ಮ ಕಾತರಕಿ ಪ.ಪೂ. ಕಾಲೇಜಿನಲ್ಲಿ ಮೇ. ೦೪ ಮತ್ತು ೦೫ ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷಾರ್ಥಿಗಳು ಕೈಗಡಿಯಾರ ಅಥವಾ ಯಾವುದೇ ಇತರೆ ಎಲೆಕ್ಟ್ರಾನಿಕ್ ಉಪಕರಣಗಳ ಸಹಿತ ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸಮಯದ ವೀಕ್ಷಣೆಗಾಗಿ ಪ್ರತಿ ಪರೀಕ್ಷಾ ಕೊಠಡಿಯೊಳಗೆ ಗೋಡೆ ಗಡಿಯಾರವನ್ನು ಅಳವಡಿಸಲಾಗಿದೆ. ಗೋಡೆ ಗಡಿಯಾರದಲ್ಲಿ ಅಭ್ಯರ್ಥಿಗforum-xcitefun-netಳು ಸಮಯವನ್ನು ನೋಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.

Leave a Reply