ಕಾವೇರಿ ನೀರಿಗಾಗಿ ಕೈಜೋಡಿಸಿದ ಕೊಪ್ಪಳ

ಕನ್ನಡ ಪರ ಸಂಘಟನೆಗಳ  ಕಾವೇರಿ ಪ್ರತಿಭಟನೆ ಇಡೀ ರಾಜ್ಯವನ್ನೇ ಸ್ಥಬ್ದಗೊಳಿಸಿದ್ದು, ಕಾವೇರಿ ನೀರಿಗಾಗಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಬಂದ್ ಗೆ  ಕೊಪ್ಪಳ ಹಾಗೂ ಕರ್ನಾಟಕದ ಬಹುತೇಕ ಕಡೆಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,  ಬಂದ್ ಆಚರಣೆ ಮಾಡಲಾಗುತ್ತಿದೆ. ಪ್ರಮುಖ ಮಾರುಕಟ್ಟೆಗಳು ಬಹುತೇಕ ಸ್ಥಗಿತಗೊಂಡಿದ್ದು, ತುರ್ತು  ಸೇವೆಗಳಾದ ಮೆಡಿಕಲ್ ಶಾಪ್, ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.  ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು, ಟೈರ್ ಗೆ ಬೆಂಕಿ ಹಾಕುವ ಮೂಲಕ  ಆಕ್ರೋಶ ವ್ಯಕ್ತಪಡಿಸಿವೆ. ಒಟ್ಟಾರೆ ಕಾವೇರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.  kpl

Leave a Reply