ಕೊಪ್ಪಳಕ್ಕೆ ಸೆ. 03 ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ

 ಭಾರತ ಸರ್ಕಾರದ ರಸ್ತೆ ಸಾರಿಗೆ, ಹೆದ್ದಾರಿ ಮತ್ತು ಬಂದರು ಖಾತೆ ಸಚಿವ ನಿತಿನ್ ಗಡ್ಕರಿ ಅವರು ಸೆ. 03 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಹೊರಟು, 10-45 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 11-30 ಗಂಟೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ-63 ಅನ್ನು ಚತುಷ್ಪಥಗೊಳಿಸುವ ಕಾಮಗಾರಿ ಹಾಗೂ ವಿವಿಧ ರಸ್ತೆ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಪಾಲ್ಗೊಳ್ಳುವರು.

Please follow and like us:
error