ಕೊಪ್ಪಳದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ

 ಕೊಪ್ಪಳದ ಭ್ರಷ್ಟಾಚಾರ ನಿಗ್ರಹ ದಳ (ಎ.ಸಿ.ಬಿ.) ವತಿಯಿಂದ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ‘ಭ್ರಷ್ಟಾಚಾರ ನಿರ್ಮೂಲನೆ’ ಹಾಗೂ ಎ.ಸಿ.ಬಿ. ಕಾರ್ಯ ವಿಧಾನದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಬುಧವಾರದಂದು ಜರುಗಿತು.

ಭ್ರಷ್ಟಾಚಾರ ನಿಗ್ರಹ ದಳದ ಬಳ್ಳಾರಿ ವಲಯದ ಪೊಲೀಸ್ ಅಧೀಕ್ಷಕರಾದ ಅನಿತಾ ಹದ್ದಣ್ಣವರ್ ಅವರು ಎ.ಸಿ.ಬಿ. ಕಾರ್ಯ ವಿಧಾನದ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಭ್ರಷ್ಟಾಚಾರ ನಿರ್ಮೂಲನೆ ಕುರಿತು ಕೊಪ್ಪಳ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ತಿಮ್ಮಾರೆಡ್ಡಿ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು. ಕೊಪ್ಪಳ ಎಸಿಬಿ ಪೊಲೀಸ್ ಠಾಣೆಯ ಅಧಿಕಾರಿ ಮೌನೇಶ್ವರ ಮಾಲಿ ಪಾಟೀಲ್, ಕರಿಯಪ್ಪ ಬನ್ನೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Please follow and like us:
error