ಕೊಪ್ಪಳದ ಶಿವಶಾಂತವೀರ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕು ಹನುಮಸಾಗರದಲ್ಲಿ ಗುರುವಾರದಂದು ಜರುಗಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕೊಪ್ಪಳದ ಶ್ರೀ ಶಿವಶಾಂತವೀರ ಪಬ್ಲಿಕ್ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ನಗರದ ಶ್ರೀ ಶಿವಶಾಂತವೀರ ಪಬ್ಲಿಕ್ ಶಾಲೆಯ 09 ನೇ ತರಗತಿ ವಿದ್ಯಾರ್ಥಿಗಳಾದ ಆಕಾಶ್ ಪಾಟೀಲ್, ಶಶಾಂಕ್ ಮಟ್ಟಿ. 08 ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಂಕ ಬೆಳವಣಕಿ, 07 ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಎನ್. ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳು. ಸಾಧನೆಗೈದ ವಿದ್ಯಾರ್ಥಿಗಳಿಗೆ -ಮ.ನಿ.ಪ್ರ.ಸ್ವ. ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು , ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.

Related posts

Leave a Comment