ಡೆಂಗ್ಯೂ ವಿರೋಧಿ ಮಾಸಾಚರಣೆ

ಕೊಪ್ಪಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಇತ್ತೀಚೆಗೆ ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಡೆಂಗ್ಯೂ ವಿರೋಧಿ ಜನಜಾಗೃತಿ ಜಾಥಾ ಕ್ಕೆ ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಚಾಲನೆ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.

ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಜನಜಾಗೃತಿ ಭಿತ್ತಿ ಪತ್ರ ಹಾಗೂ ನಿಯಂತ್ರಣ ಕುರಿತ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿ, ಡೆಂಗ್ಯು, ಚಿಕುನ್‌ಗುನ್ಯಾ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಜನರಲ್ಲಿನ ಅನಗತ್ಯ ಆತಂಕವನ್ನು ದೂರಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್ ಅವರು ಮಾತನಾಡಿ, ಡೆಂಗ್ಯೂ ಮಹಾಮಾರಿಯನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ಸಮರೋಪಾದಿಯಲ್ಲಿ ಜನಜಾಗೃತಿ ಮೂಡಿಸಬೇಕು, ಹಾಗೂ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಮಕ್ಕಳಲ್ಲಿಯೂ ಜಾಗೃತಿ ಮೂಡಿಸಿ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಮಾರಕ ರೋಗಗಳನ್ನು ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ಹೆಚ್ ಮಾತನಾಡಿ ಕಡಿತ ಸಣ್ಣದು ಕಂಟಕ ದೊಡ್ಡದು ಡೆಂಗ್ಯೂ, ಚಿಕೂನ್‌ಗುನ್ಯಾಗಳಿಗೆ ಯಾವುದೇ ನಿರ್ದಿಷ್ಟ ಔಷಧಿ ಇಲ್ಲ ಆದ್ದರಿಂದ ಸ್ವಚ್ಛ ಪರಿಸರವೊಂದೇ ಪರಿಹಾರ ಮಾರ್ಗವೆಂದರು.ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವಿ ಎಸ್ ಮಾದಿನೂರ ಮಾತನಾಡಿ ನಿಂತ ನೀರು ಸೊಳ್ಳೆಯ ತವರು, ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಲು ಹಾಗೂ ಮನೆಯ ಸುತ್ತಮುತ್ತ ನೀರು ಶೇಖರಣೆ ಸಲಕರಣೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛ ಮಾಡಿ ನೀರು ತುಂಬಿಡಬೇಕು ಎಂದು ಸಲಹೆ ನೀಡಿದರು. ಜಾಗೃತಿ ಜಾಥಾ ನಗರದ ಪ್ರಮುಖ ರಸ್ತೆ ಮೂಲಕ ಸಂಚರಿಸಿ ಜನ ಜಗೃತಿ ಮೂಡಿಸಲಾಯಿತು. ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕ ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾತಾದಲ್ಲಿ ಪಾಲ್ಗೊಂಡಿದ್ದರು.ಬುಧವಾರದಂದು ಜಿಲ್ಲೆಯ ಖಾಸಗಿ ವೈದ್ಯರುಗಳಿಗೆ ಡೆಂಗ್ಯೂ ಜ್ವರ ಪ್ರಕರಣಗಳ ಪತ್ತೆ ಮತ್ತು ನಿರ್ವಹಣೆ ಕುರಿತು ಕೊಪ್ಪಳ ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು.
ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ. ಎಸ್ ಎಮ್ ಮಲಾಪುರೆ ಕಾರ್ಯಾಗಾರ ಉದ್ಘಾಟಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಮಾತನಾಡಿ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳು ಅಧಿಸೂಚಿತ ರೋಗಗಳ ಪಟ್ಟಿಯಲ್ಲಿ ಬರುತ್ತವೆ. ಈ ಪ್ರಕರಣಗಳ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು ಹಾಗೂ ರೋಗಪತ್ತೆ ಹಾಗೂ ನಿರ್ವಹಣೆಯನ್ನು ರಾಷ್ಟ್ರೀಯ ಮಾರ್ಗಸೂಚಿಯನ್ವಯವೇ ನಿಯಮಗಳನ್ನು ಪಾಲಿಸಬೇಕು ಎಂದರು. m1ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಮಾತನಾಡಿ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯು ಜ್ವರ ಪೀಡಿತರಿಗೆ ಪ್ರತ್ಯೇಕ ಕೊಠಡಿ ಮೀಸಲಿಡಲು ಹಾಗೂ ರೋಗಿಗಳಿಗೆ ಸೊಳ್ಳೆಪರದೆಗಳನ್ನು ನೀಡಿ ಡೆಂಗ್ಯುಜ್ವರ ಆಸ್ಪತ್ರೆಯಲ್ಲಿ ಹರಡದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

Please follow and like us:
error