You are here
Home > Koppal News-1 > koppal news > ದಸರಾ ಕ್ರೀಡಾಕೂಟಕ್ಕೆ ಕೊಪ್ಪಳ ಜಿಲ್ಲೆಯ ಕ್ರೀಡಾಪಟುಗಳ ಆಯ್ಕೆ

ದಸರಾ ಕ್ರೀಡಾಕೂಟಕ್ಕೆ ಕೊಪ್ಪಳ ಜಿಲ್ಲೆಯ ಕ್ರೀಡಾಪಟುಗಳ ಆಯ್ಕೆ

ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಾದ ಬಾಲಮ್ಮ 3000 ಮೀ. ಮತ್ತು 1500 ಮೀ ಓಟದಲ್ಲಿ ಪ್ರಥಮ, ದೀಪಾ 200 ಮೀ. ಓಟದಲ್ಲಿ ಪ್ರಥಮ, 100 ಮತ್ತು 400 ಮೀ ಓಟದಲ್ಲಿ ದ್ವಿತೀಯ ಸ್ಥಾನ, ಮಲ್ಲಮ್ಮ 200 ಮತ್ತು 800 ಮೀ. ಓಟದಲ್ಲಿ ತೃತೀಯ ಸ್ಥಾನ, ಮಂಜುಳಾ 800 ಮೀ. ಓಟದಲ್ಲಿ ಪ್ರಥಮ, ಗವಿಸಿದ್ದಮ್ಮ 3000 ಮತ್ತು 1500 ಮೀ. ಓಟದಲ್ಲಿ ದ್ವಿತೀಯ ಸ್ಥಾನ, ರೇಣುಕಾ 400 ಮತ್ತು 100 ಮೀ. ಹರ್ಡಲ್ಸ್‍ನಲ್ಲಿ ಪ್ರಥಮ ಹಾಗೂ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಲ್ಲದೇ 400*100 ಮೀ ಮತ್ತು 4*400 ಮೀ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Top