ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಂಕೀರ್ಣ ಕಾಮಗಾರಿಗೆ ಭೂಮಿ ಪೂಜೆ

?????????????

 ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಕಛೇರಿ ಹಾಗೂ ವಾಣಿಜ್ಯ ಸಂಕೀರ್ಣದ ಕಟ್ಟಡ ಕಾಮಗಾರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕೊಪ್ಪಳದಲ್ಲಿ ಸೋಮವಾರದಂದು ಭೂಮಿಪೂಜೆ ನೆರವೇರಿಸಿದರು.

ಅಂದಾಜು ೦೪ ಕೋಟಿ ರೂ. ವೆಚ್ಚದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಕಛೇರಿ ಹಾಗೂ ವಾಣಿಜ್ಯ ಸಂಕೀರ್ಣದ ಕಟ್ಟಡ ಕೊಪ್ಪಳದಲ್ಲಿ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ, ಜಿ.ಪಂ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ನಗರ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದ್ರಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿ.ಪಂ. ಸದಸ್ಯ ಕೆ ರಾಜಶೇಖರ ಹಿಟ್ನಾಳ, ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ, ಲೊಕೊಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಲಷ್ಕರ ನಾಯ್ಕ, ಸಹಾಯಕ ಅಭಿಯಂತರ ಪೊಬಾಲನ್, ಗಣ್ಯರಾದ ಶಾಂತಣ್ಣ ಮುದಗಲ್, ಹನಮರಡ್ಡಿ ಹಂಗನಕಟ್ಟಿ. ಅಮ್ಜದ ಪಟೇಲ್, ಮುತ್ತುರಾಜ ಕುಷ್ಟಗಿ. ಕೃಷ್ಣ ಇಟ್ಟಂಗಿ, ಕುರಗೂಡ ರವಿ, ಅಕ್ಬರ ಪಾಷ ಪಲ್ಟನ ಉಪಸ್ಥಿತರಿದ್ದರು.

Please follow and like us:
error