ನಗರ- ಪಟ್ಟಣಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲು- ಜಿಲ್ಲಾಧಿಕಾರಿ ಕನಗವಲ್ಲಿ

ಕೊಪ್ಪಳ –  ನಗರ ಮತ್ತು ಪಟ್ಟಣ ಅಭಿವೃದ್ಧಿ ಯೋಜನೆಗಳ ಕ್ರಿಯಾ ಯೋಜನೆಯನ್ನು ತಿಂಗಳಾಂತ್ಯದೊಳಗೆ ಅನುಮೋದನೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ನಗರ, ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳ ಅಭಿವೃದ್ಧಿಗಾಗಿ ಈಗಾಗಲೆ ಜಾರಿಯಲ್ಲಿರುವ ಯೋಜನೆಗಳಿಗೆ ಆಗಸ್ಟ್ ತಿಂಗಳಾಂತ್ಯದೊಳಗಾಗಿ ಕ್ರಿಯಾ ಯೋಜನೆಯನ್ನು ತಯಾರಿಸಿ, ಅನುಮೋದನೆಗಾಗಿ ಕೂಡಲೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಈಗಾಗಲೆ ಅನುಮೋದನೆ ಪಡೆಯಲಾಗಿರುವ ಕ್ರಿಯಾ ಯೋಜನೆಗಳಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿ, ಸೆಪ್ಟಂಬರ್ ತಿಂಗಳ ಒಳಗಾಗಿ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಬೇಕು ಎಂದು ಜಿಲ್ಲೆಯ ಎಲ್ಲ ನಗರಸಭೆ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳಿಗೆ dc ಸೂಚನೆ ನೀಡಿದರು.ಗೃಹ ಭಾಗ್ಯ ಯೋಜನೆಯಡಿ ಖಾಯಂ ವಸತಿ ರಹಿತ ಪೌರಕಾರ್ಮಿಕರುಗಳಿಗೆ ಮನೆಗಳನ್ನು ನಿರ್ಮಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಕೂಡಲೆ ಸಿದ್ಧಪಡಿಸಿ ಸಲ್ಲಿಸುವಂತೆ ಕೊಪ್ಪಳ ಮತ್ತು ಗಂಗಾವತಿ ನಗರಸಭೆಯ ಪೌರಾಯುಕ್ತರುಗಳಿಗೆ ಅವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಕೊಪ್ಪಳ, ಗಂಗಾವತಿ ನಗರಸಭೆ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply