ನಗರ ಸ್ಥಳೀಯ ಸಂಸ್ಥೆಗಳು ತೆರಿಗೆ ವಸೂಲಾತಿ ಒತ್ತು ನೀಡಿ – ಸಚಿವ ಬಸವರಾಜ ರಾಯರಡ್ಡಿ

????????????????????????????????????

ಕೊಪ್ಪಳ- (ಕ ವಾ) : ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ತೆರಿಗೆ ಸಂಗ್ರಹ ತೃಪ್ತಿಕರವಾಗಿಲ್ಲ. ಈ ವರ್ಷ ಆಸ್ತಿ ತೆರಿಗೆ, ನೀರಿನ ತೆರಿಗೆ ಮತ್ತು ಮಳಿಗೆಗಳ ಬಾಡಿಗೆ ಸಂಗ್ರಹ ಸೇರಿದಂತೆ ಎಲ್ಲ ಕರ ವಸೂಲಾತಿ ಸಂಗ್ರಹ ನಿಗದಿತ ಗುರಿ ತಲುಪಬೇಕು. ಈ ಮೂಲಕ ಆರ್ಥಿಕ ಸದೃಢತೆ ಹೊಂದಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕೊಪ್ಪಳದ ನಿರ್ಮಿತಿ ಕೇಂದ್ರದ ಸಭಾಂಗಣದಲ್ಲಿ  ಏರ್ಪಡಿಸಲಾಗಿದ್ದ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

????????????????????????????????????

????????????????????????????????????

 ಕೊಪ್ಪಳ ನಗರಸಭೆಯಲ್ಲಿ ಆಸ್ತಿ ತೆರಿಗೆ, ನೀರಿನ ಕರ ವಸೂಲಾತಿ ಹಾಗೂ ಮಳಿಗೆಗಳ ಬಾಡಿಗೆ ವಸೂಲಾತಿ ಸೇರಿದಂತೆ ಒಟ್ಟು 4.6ಕೋಟಿ ರೂ. ತೆರಿಗೆ ಸಂಗ್ರಹಿಸಬೇಕಿದೆ. ಈ ಪೈಕಿ ನೀರಿನ ಕರ ವಸೂಲಾತಿ 1. 19 ಕೋಟಿ ರೂ. ವಸೂಲಿ ಮಾಡಬೇಕಿದೆ. 20015-16 ರಲ್ಲಿ ಕೇವಲ ೦೩ ಕೋಟಿ ರೂ. ಗಳಷ್ಟು ತೆರಿಗೆ ವಸೂಲಾತಿ ಆಗಿದೆ. ನೀರಿನ ಕರ ವಸೂಲಾತಿಯಲ್ಲಿಯೂ ತೃಪ್ತಿಕರವಾಗಿಲ್ಲ. ಹೀಗಾದರೆ ನಗರಸಭೆ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಿಲ್ಲ, ಅಲ್ಲದೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನದ ಕೊರತೆ ಆಗಲಿದೆ. ಇನ್ನು ಕೊಪ್ಪಳ ನಗರಸಭೆಯ ಒಟ್ಟು 92 ಮಳಿಗೆಗಳಿದ್ದು, ಮಳಿಗೆಗಳ ಬಾಡಿಗೆ ದರ ಅತ್ಯಂತ ಕಡಿಮೆ ಇದೆ. ಕೂಡಲೆ ಮಳಿಗೆಗಳ ಬಾಡಿಗೆ ದರ ಪರಿಷ್ಕರಣೆ ಆಗಬೇಕು. ಸರ್ಕಾರದ ನಿಯಮ ಹಾಗೂ ಮಾರ್ಗಸೂಚಿಯನ್ವಯ ಮಳಿಗೆಗಳ ಬಾಡಿಗೆ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ಹಾಗೂ ನಗರಸಭೆ ಅಧ್ಯಕ್ಷರಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ,  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ನಗರಸಭೆಗಳ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Please follow and like us:
error