ಪಠ್ಯೇಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳ ಅಗತ್ಯವಿದೆ – ಎಸ್.ಬಿ.ನಾಗರಳ್ಳಿ

ಕೊಪ್ಪಳ: ಮಕ್ಕಳಿಗೆ ಪಠ್ಯೇ ವಿಷಯಗಳ ಜೊತೆಗೆ ಪಠ್ಯೇತರ ವಿಷಯಗಳ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಎಸ್.ಬಿ.ನಾಗರಳ್ಳಿ ಹೇಳಿದರು.
ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾಳಿದಾಸ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ಪ್ರತಿಯೊಂದು ಮಗುವಿನಲ್ಲಿ ವಿಭಿನ್ನ ರೀತಿಯ ಪ್ರತಿಭೆಗಳಿರುತ್ತವೆ.ಮಕ್ಕಳನ್ನು ಕೇವಲ ಪಠ್ಯೇ ವಿಷಯಗಳಿಗೆ ಮಾತ್ರ ಸಿಮಿತಗೊಳಿಸದೇ ಅವರಲ್ಲಿ ಇರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುವುದಿಲ್ಲ.ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವುದರಿಂದ ಅವರಲ್ಲಿ ಇರುವ ವಿಶೇಷ ಪ್ರತಿಭೆಗಳನ್ನು ಗುರುತಿಸಲು ಸಾಧ್ಯವಾಗುತ್ತದೆ.ಶಿಕ್ಷಕರು ಕೂಡಾ ಮಕ್ಕಳಲ್ಲಿ ಇರುವ ಪ್ರತಿಭೆಗಳನ್ನು ಶಾಲಾ ಹಂತಗಳಲ್ಲಿ ಗುರುತಿಸುವ ಕೆಲಸ ಮಾಡಬೇಕು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನ್ನವರ್ ಮಾತನಾಡಿ,ಜಿಲ್ಲೆಯಲ್ಲಿ ಖಾಲಿ ಇರುವ ವೃತ್ತಿ ಶಿಕ್ಷಕರನ್ನು ತುಂಬುವ ಕೆಲಸವಾಗಬೇಕು.ಈ ವರ್ಷದಿಂದ ಕಲೋತ್ಸವ ಎಂಬ ವಿಶೇಷ ಚಟುವಟಿಕೆಯನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕರಾದ ರಾಘವೇಂದ್ರ ಹಿಟ್ನಾಳ ಮಾತನಾಡುತ್ತ, ಶೈಕ್ಷಣಿಕ ಅಭಿವೃದ್ದಿಗಾಗಿ ಸರಕಾರವು ಹೆಚ್ಚು ಹೆಚ್ಚು ಹಣವನ್ನು ಮೀಸಲಿಡುತ್ತಿದೇ,ಶಾಲಾ ಮಕ್ಕಳಿಗಾಗಿ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಿದರು ಕೂಡಾ ಶೈಕ್ಷಣಿಕ ಕ್ಷೇತ್ರದಲ್ಲಿ ನೀರಿಕ್ಷಿತ ಸುಧಾರಣೆ ಯಾಗದಿರುವುದು ವಿಷಾದನೀಯ ಸಂಗತಿಯಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನೂ ಸುಧಾರಣೆಯಾಗಬೇಕಿದೆ.೧೦ನೇ ತರಗತಿಯ ಫಲಿತಾಂಶದಲ್ಲಿ ಶಿಕ್ಷಕರು ಹೆಚ್ಚು ಪರಿಶ್ರಮವನ್ನು ವಹಿಸಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಬೇಕು ಜೊತೆಗೆ ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಹೆಚ್ಚು ಭಾಗವಹಿಸಬೇಕು.ಮಕ್ಕಳಿಗೆ ಸ್ಪರ್ಧೇ ಮಾಡುವ ಮನೋಭಾವನೆಯನ್ನು ಬೆಳಸಬೇಕು.ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.ವಿಷಯ ಪರಿವಿಕ್ಷಕರಾದ ಗುರುಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ ಅಧ್ಯಕ್ಷರಾದ ಬಾಲಚಂದ್ರನ್, ಉಪನಿರ್ದೇಶಕರಾದ ಶ್ಯಾಮಸುಂದರ ,ಕಾಳಿದಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹನುಮಂತಪ್ಪ ಅಂಗಡಿ,ಸರಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ,ಸರ್ಕಾರಿ ಅಂಗವಿಕಲ ನೌಕರರ ಸಂಘ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ,ಬಾಗ್ಯನಗರ ಪಟ್ಟಣ ಪಂಚಾಯತಿಯ ಅಧ್ಯಕ್ಷರಾದ ಮಂಜಮ್ಮ,ಉಪಾಧ್ಯಕ್ಷರಾದ ತಾರಾಬಾಯಿ,ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ವೆಂಕಟೇಶಗೌಡರ,ತಾಲೂಕ ಅಧ್ಯಕ್ಷರಾದ ಮಾರ್ತಂಡರಾವ ದೇಸಾಯಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷರಾದ ಶರಣೇಗೌಡ,ಪ್ರಧಾನ ಕಾರ್ಯದರ್ಶಿ ಶರಣಬಸವನಗೌಡ,ಮುಖ್ಯೋಪಾಧ್ಯಾಯರಾದ ಎಸ್.ಎಸ್.ಗುರುವಿನ್,ಪ್ರಾಚಾರ್ಯರಾದ ನಾಗನಗೌಡ,ಶಿವಾನಂದ ಹೊದ್ಲೂರು,ದ್ಯಾಮಣ್ಣ ಚಿಲವಾಡಗಿ ಮುಂತಾದವರು ಹಾಜರಿದ್ದರು.

Please follow and like us:
error