ಪ್ರತಿಭಾ ಕಾರಂಜಿಯು ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಸಹಾಯಕ – ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ: ಪ್ರತಿಭಾ ಕಾರಂಜಿಯು ಸೃಜನಾತ್ಮಕ ಚಟುವಟಿಕೆಯ ಕಾರ್ಯಕ್ರಮವಾಗಿದೆ ಎಂದು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಕೊಳೂರು ರಸ್ತೆಯಲ್ಲಿ ಇರುವ ಎಸ್.ಎ.ನಿಂಗೋಜಿ ಪಬ್ಲಿಕ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಪ್ರತಿಭಾ ಕಾರಂಜಿಯು ಶಿಕ್ಷಣ ಇಲಾಖೆಯಲ್ಲೆ ಒಂದು ವಿಶೇಷ ಕಾರ್ಯಕ್ರಮವಾಗಿದ್ದು, ಸೃಜನಾತ್ಮಕ ಚಟುವಟಿಕೆಯಾಗಿದೆ. ಪ್ರತಿಯೊಂದ ಮಗುವಿನಲ್ಲಿ ಒಂದಲ್ಲ ಒಂದು ಪ್ರತಿಭೆಯು ಅಡಗಿರುತ್ತದೆ.  ಅಂತಹ ಪ್ರತಿಭೆಗಳನ್ನು ಹೊರಹಾಕಲು ವೇದಿಕೆಗಳ ಅಗತ್ಯವಿದೆ. ಪ್ರತಿಭಾ ಕಾರಂಜಿಯು ಅಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಸಹಾಯಕವಾಗಿದೆ. ಪ್ರತಿಯೊಬ್ಬ ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಕಡೆಗೆ ಹೆಚ್ಚು ಗಮನವನ್ನು ಹರಿಸಬೇಕು. ಗುಣಾತ್ಮಕ ಶಿಕ್ಷಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಮಕ್ಕಳು ಭಾಗವಹಿಸುವಂತೆ ಶಿಕ್ಷಕರು ತಯಾರು ಮಾಡಬೇಕು. ರಾಜ್ಯ ಸರಕಾರವು ಆಯ-ವ್ಯಯದಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ದಿಗಾಗಿ ಹೆಚ್ಚಿನ ಹಣವನ್ನು ಮೀಸಲಿಡಲಾಗಿದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಪೂಜಾರ ಮಾತನಾಡುತ್ತ, ಪ್ರತಿಭಾ ಕಾರಂಜಿಯಂತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲಿನ ವಿಶೇಷ ಪ್ರತಿಭೆಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಜೊತೆಗೆ ಪ್ರೌಢ ಶಾಲಾ ಮಕ್ಕಳಿಗಾಗಿ ಕಲೋತ್ಸವ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Leave a Reply