You are here
Home > Koppal News-1 > koppal news > ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ವಿಗ್ರಹಗಳ ನಿಷೇಧ

ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ವಿಗ್ರಹಗಳ ನಿಷೇಧ

ಕೊಪ್ಪಳ- ಆ.17 (ಕ ವಾ): ಪರಿಸರಕ್ಕೆ ಹಾನಿಕಾರಕವಾಗಿರುವ ಪ್ಲಾಸ್ಟರ್ ಆಫ್ ಪ್ಯಾರಿಸ್ -ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಜಿಲ್ಲೆಯಲ್ಲಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದ್ದಾರೆ.ಗೌರಿ-ಗಣೇಶ ಹಬ್ಬದ ಅಂಗವಾಗಿ ಗಣೇಶ ವಿಗ್ರಹಗಳನ್ನು ಮಾಡಲಾಗುತ್ತಿದ್ದು, ಪರಿಸರಕ್ಕೆ ಹಾನಿಕಾರಕವಾಗಿರುವ ಪ್ಲಾಸ್ಟರ್ ಆಫ್ ಪ್ಯಾರೀಸ್ga-ಬಣ್ಣ ಲೇಪಿತವಾದಂತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜನೆ ಮಾಡುವುದರಿಂದ ನೀರು ಕಲುಷಿತಗೊಂಡು, ಜಲ ಮೂಲಗಳ ಮೇಲೆ ಅವಲಂಬಿತವಾದ ಪಶು, ಪಕ್ಷಿ, ಪ್ರಾಣಿಗಳು ಮತ್ತು ಇತರೆ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುವುದರ ಜೊತೆಗೆ, ಪರಿಸರಕ್ಕೆ ಮತ್ತು ಸಾರ್ವಜನಿಕರಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ಮಾಡಿದ ಬಣ್ಣದ ವಿಗ್ರಹಗಳ ವಿಸರ್ಜನೆಯನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜು.೨೦ ರ ಅಧಿಸೂಚನೆಯಲ್ಲಿ ಆದೇಶ ಹೊರಡಿಸಿದೆ. ವಿಗ್ರಹಗಳು ಮತ್ತು ಮಂಟಪಗಳನ್ನು ತಯಾರಿಸುವ ಸಂದರ್ಭದಲ್ಲಿ ನೈಸರ್ಗಿಕವಾಗಿ ತಯಾರಿಸಲಾಗಿರುವ ಹಾಗೂ ಪರಿಸರಕ್ಕೆ ಹಾನಿಯಾಗದಂತಹ ಬಣ್ಣಗಳನ್ನು ಹಾಗೂ ಸಾಮಗ್ರಿಗಳನ್ನು ಉಪಯೋಗಿಸಬೇಕು. ನೀರಿನಲ್ಲಿ ಕರಗದ/ತೇಲುವ, ಪರಿಸರಕ್ಕೆ ಹಾನಿಕರವಾಗಿರುವ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿಗಳನ್ನು ತಯಾರಿಸುವುದಾಗಲಿ, ಮಾರಾಟ ಮಾಡುವುದಾಗಲಿ ಮಾಡಬಾರದು. ಗಣೇಶ ಮೂರ್ತಿಗಳನ್ನು ತಯಾರಿಸುವಾಗ ನೀರಿನಲ್ಲಿ ಕರಗುವಂತಹ ಬಣ್ಣಗಳು ಹಾಗೂ ವಿಷಯುಕ್ತವಲ್ಲದ ನೈಸರ್ಗಿಕ ಬಣ್ಣ ಬಳಸಿ ತಯಾರಿಸಬೇಕು. ಸಾರ್ವಜನಿಕರು ಸಾಧ್ಯವಿದ್ದಷ್ಟು ಚಿಕ್ಕದಾದ ಮೂರ್ತಿಗಳನ್ನು ಪೂಜೆಗೆ ಬಳಸುವುದು ಸೂಕ್ತ. ತೈಲ ಬಣ್ಣಗಳು ಅಪಾಯಕಾರಿ ರಾಸಾಯನಿಕಗಳಿಂದ ಕೂಡಿದ್ದು, ಜೇಡಿ ಮಣ್ಣಿನಿಂದ ಮಾಡಿದ ಹಾಗೂ ನೈಸರ್ಗಿಕ ಬಣ್ಣ ಬಳಸಿದ ಮೂರ್ತಿಗಳನ್ನು ಮಾತ್ರ ಖರೀದಿಸಬೇಕು. ಗಣೇಶ ಮೂರ್ತಿಯನ್ನು ಬಕೆಟ್‌ನಲ್ಲಿಯೂ ವಿಸರ್ಜಿಸಬಹುದಾಗಿದೆ. ವಿಸರ್ಜಿಸುವುದಕ್ಕಿಂತ ಮುಂಚೆ ಮೂರ್ತಿಗೆ ಪೂಜೆ ಮಾಡಲು ಉಪಯೋಗಿಸಿದ ಹೂವು, ವಸ್ತ್ರ, ಅಲಂಕಾರಿಕ ಸಾಮಗ್ರಿಗಳನ್ನು ತೆಗೆದು, ನಂತರವೇ ವಿಸರ್ಜಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Top