ಬೆಳೆ ಪರಿಹಾರ ತಲುಪದ ರೈತರ ಮಾಹಿತಿ ಪಡೆಯಲು ಸೂಚನೆ -ಅಧ್ಯಕ್ಷ ಶೇಖರಪ್ಪ ನಾಗರಳ್ಳಿ

ಕೊಪ್ಪಳ – ಕಳೆದ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಅನುಭವಿಸಿದ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮಾ ಮಾಡಲಾಗಿದ್ದು, ಇದುವರೆಗೂ ಪರಿಹಾರ ಜಮಾ ಆಗದಿರುವ ರೈತರ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ, ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ಪರಿಹಾರ ಒದಗಿಸಲು ಸರ್ಕಾರ 64 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ ಬ್ಯಾಂಕ್ ಖಾತೆಯಲ್ಲಿನ ಲೋಪದೋಷ, ಕೆಲವು ರೈತರ ಗುಳೆ, ಜಂಟಿ ಹೆಸರಿನಲ್ಲಿ ಜಮೀನು ಇರುವುದು, ರೈತರ ಬ್ಯಾಂಕ್ ಖಾತೆಗಳು ನಿಷ್ಕ್ರಿಯವಾಗಿರುವುದು ಹೀಗೆ ಹಲವಾರು ಕಾರಣಗಳಿಂದ ಜಿಲ್ಲೆಯಲ್ಲಿ ಸುಮಾರು 30 ರಿಂದ 35 ಸಾವಿರ ರೈತರಿಗೆ ಪರಿಹಾರ ಹಣ ದೊರೆತಿಲ್ಲ. ಈ ನಿಟ್ಟಿನಲ್ಲಿ ಪರಿಹಾರ ತಲುಪದೇ ಇರುವ ರೈತರ ಮಾಹಿತಿಯನ್ನು ಸಂಗ್ರಹಿಸಿ, ಅವರಿಗೆ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಸೇರಿದಂತೆ ಜಿ.ಪಂ. ಸದಸ್ಯರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

????????????????????????????????????

Please follow and like us:

Related posts

Leave a Comment